ಪುತ್ತೂರು: ಕೋರ್ಟ್ ನಲ್ಲಿ ಜಡ್ಜ್ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಸಮಗ್ರ ನ್ಯೂಸ್: ವ್ಯಕ್ತಿಯೋರ್ವ ಕೋರ್ಟ್ ನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ. ಕಾವು ಮಣಿಯಡ್ಕ ನಿವಾಸಿ ರವಿ (35) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

Ad Widget ... ..

ರವಿ ಹಾಗೂ ಪತ್ನಿ ವಿದ್ಯಾಶ್ರೀ ನಡುವೆ ಕೌಟುಂಬಿಕ ಕಲಹವಾಗಿತ್ತು. ಎರಡು ದಿನಗಳ ಹಿಂದೆ ರವಿ ತನ್ನ ಪತ್ನಿ ವಿದ್ಯಾಶ್ರೀಯನ್ನು ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದ. ಗಂಡ-ಹೆಂಡತಿ ಜಗಳ ಪೊಲೀಸ್ ಠಾಣೆಯ ಮೆಟ್ಟಿಲೇರಿತ್ತು. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

Ad Widget

ಬಳಿಕ ಇಬ್ಬರ ನಡುವೆ ವಿಚ್ಛೇದನದ ಮಾತುಕತೆ ನಡೆದಿತ್ತು. ಮಹಿಳಾ ಠಾಣೆಗೆ ಹಾಜರಾಗುವಂತೆ ರವಿಗೆ ಪೊಲೀಸರು ಸೂಚಿಸಿದ್ದರು. ಈ ನಡುವೆ ರವಿ ಪುತ್ತೂರು ಕೋರ್ಟ್ ಗೆ ತೆರಳಿದ್ದಾನೆ. ಕೋರ್ಟ್ ನಲ್ಲಿ ಜಡ್ಜ್ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಳಿಕ ನ್ಯಾಯಾಲಯದಲ್ಲಿಯೇ ವಾಂತಿ ಮಾಡಿಕೊಂಡಿದ್ದಾನೆ. ತಕ್ಷಣ ಕೋರ್ಟ್ ಸಿಬ್ಬಂದಿ, ಪೊಲೀಸರು ರವಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ರವಿಯನ್ನು ಶಿಫ್ಟ್ ಮಾಡಲಾಗಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Comment

Your email address will not be published. Required fields are marked *