ಸಮಗ್ರ ನ್ಯೂಸ್: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಮೂಲದ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು.
ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಆದಾಯ ತೆರಿಗೆ ಇಲಾಖೆಯ ಪದೇ ಪದೇ ಆದ ದಾಳಿಗಳಿಂದ ಹೆದರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ನಗರದಲ್ಲಿ ಇವರ ಹೆಸರಿನಲ್ಲಿ ಹಲವು ದೊಡ್ಡ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳು ಇದ್ದವು. ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೃತರಿಗೆ ಪತ್ನಿ ಲಿನಿ ರಾಯ್, ರೋಹಿತ್ ಮತ್ತು ರಿಯಾ ಎಂಬ ಇಬ್ಬರು ಮಕ್ಕಳು ಇದ್ದರು. ಮಗ ರೋಹಿತ್, ಕಾನ್ಫಿಡೆಂಟ್ ಗ್ರೂಪ್‌ನ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ವಿನ್ಯಾಸ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ.
2005ರಲ್ಲಿ ಆರಂಭವಾದ ಈ ಸಂಸ್ಥೆ, 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್ಮೆಂಟ್, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಕಾನ್ಫಿಡೆಂಟ್ ಗ್ರೂಪ್ ಕಾರ್ಯನಿರ್ವಹಿಸುತ್ತಿದೆ.






