ಕರ್ನಾಟಕ ಫಿಲಂ ಚೇಂಬರ್ ಅಧ್ಯಕ್ಷರಾಗಿ ಡಾ| ಜಯಮಾಲಾ ಆಯ್ಕೆ

ಸಮಗ್ರ ನ್ಯೂಸ್: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ(ಫಿಲಂ ಚೇಂಬರ್) ನೂತನ ಅಧ್ಯಕ್ಷರಾಗಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ. 170 ಮತಗಳ ಅಂತರದಿಂದ ನಟಿ ಜಯಮಾಲಾ ಗೆಲುವು ಸಾಧಿಸಿದ್ದಾರೆ.

Ad Widget ... .. Ad Widget .

ಅಧ್ಯಕ್ಷ ಸ್ಥಾನಕ್ಕೆ ಒಟ್ಟು 813 ಮತಗಳು ಚಲಾವಣೆ ಆಗಿದ್ದು, ಅವುಗಳಲ್ಲಿ 512 ಮತಗಳನ್ನು ಜಯಮಾಲಾ ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ಎದುರಾಳಿ ಭಾ.ಮಾ ಹರೀಶ್ 334 ಮತಗಳನ್ನು ಪಡೆಯಲಷ್ಟೇ ಶಕ್ತರಾದರು.

Ad Widget

ಆ ಮೂಲಕ ಮುಂದಿನ ಅವಧಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿದ್ದಾರೆ. ಅವರು ಎರಡನೇ ಬಾರಿ ಫಿಲಂ ಚೇಂಬರ್​​ನ ಅಧ್ಯಕ್ಷರಾಗಲಿದ್ದಾರೆ. 2008ರಲ್ಲಿ ಅವರು ಮಂಡಳಿಯ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಈಗ ಮತ್ತೊಮ್ಮೆ ಅಧ್ಯಕ್ಷರಾಗಲಿದ್ದಾರೆ.

Leave a Comment

Your email address will not be published. Required fields are marked *