ಕಡಬ: ತಂದೆಗೆ ಚೂರಿ ಇರಿದು ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ಮಗ| ತಂದೆ ಗಂಭೀರ, ಮಗ ದುರ್ಮರಣ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಪಾದೆ ಎಂಬಲ್ಲಿ ಮನಕಲಕುವ ಘಟನೆಯೊಂದು ಸಂಭವಿಸಿದೆ. ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳವಾಡಿದ 17 ವರ್ಷದ ಬಾಲಕನೋರ್ವ, ತಂದೆಗೆ ಚೂರಿಯಿಂದ ಇರಿದು ಬಳಿಕ ತಾನೂ ಕೋವಿಯಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ ಅಮೀನ್ ಎಂಬವರ ಪುತ್ರ ಮೋಕ್ಷ (17) ಮೃತಪಟ್ಟ ದುರ್ದೈವಿ. ಮೂಲತಃ ಕೇರಳದವರಾದ ವಸಂತ ಅಮೀನ್ ಅವರು ರಾಮಕುಂಜದ ಪಾದೆಯಲ್ಲಿ ಜಾಗ ಖರೀದಿಸಿ ಮನೆ ನಿರ್ಮಿಸಿಕೊಂಡು ವಾಸವಾಗಿದ್ದರು. […]










