January 2026

ಕೇರಳದಲ್ಲಿ ಹಕ್ಕಿಜ್ವರ ಭೀತಿ| ಎಚ್ಚರಿಕೆಯಿಂದ ಇರಲು ಸೂಚನೆ

ಸಮಗ್ರ ನ್ಯೂಸ್: ಭಾರತದಲ್ಲಿ ಮತ್ತೊಮ್ಮೆ ಹಕ್ಕಿ ಜ್ವರ ಭೀತಿ ಜನರಲ್ಲಿ ಆತಂಕ ಮೂಡಿಸಿದೆ. ಕೇರಳದಲ್ಲಿ ಕೆಲವು ಶಂಕಿತ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಧರಿಸುವಂತೆ ಸಲಹೆ ನೀಡಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ. ಹಕ್ಕಿ ಜ್ವರ ಹರಡುವ ಸಾಧ್ಯತೆ ಇರುವುದರಿಂದ, ವಿಶೇಷವಾಗಿ ಕೋಳಿ ಸಾಕಣೆ ಕೇಂದ್ರಗಳು, ಕೋಳಿ ಮಾರುಕಟ್ಟೆಗಳು ಹಾಗೂ ಕೋಳಿ ಸಂಸ್ಕರಣೆ ಘಟಕಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಆರೋಗ್ಯ ಪ್ರೋಟೋಕಾಲ್‌ಗಳನ್ನು ಪಾಲಿಸಬೇಕು […]

ಕೇರಳದಲ್ಲಿ ಹಕ್ಕಿಜ್ವರ ಭೀತಿ| ಎಚ್ಚರಿಕೆಯಿಂದ ಇರಲು ಸೂಚನೆ Read More »

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ದುರ್ನಡತೆ – ಹೈಕೋರ್ಟ್

ಸಮಗ್ರ ನ್ಯೂಸ್: ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿ ಹಕ್ಕಲ್ಲ, ಶ್ರದ್ಧೆ ಇಲ್ಲದ ನೌಕರನಿಗೆ ಸಹಾನುಭೂತಿ ಬೇಡ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪೂರ್ವಾನುಮತಿ ಇಲ್ಲದೆ ಕೆಲಸಕ್ಕೆ ಗೈರಾಗುವುದು ದುರ್ನಡತೆ, ಶ್ರದ್ಧೆಯಿಂದ ಕೆಲಸ ಮಾಡದ ಉದ್ಯೋಗಿಗೆ ಸಹಾನುಭೂತಿ ತೋರಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಟ್ರೈನಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ವೆಂಕಟರಾಮಯ್ಯ ಎಂಬುವವರನ್ನು ಸೇವೆಯಿಂದ ತೆಗೆದು ಹಾಕಿದ್ದ ಆದೇಶ ರದ್ದುಪಡಿಸಿದ್ದ ಕಾರ್ಮಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ಬಿಎಂಟಿಸಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದು, ಈ ಅರ್ಜಿ

ಅನಧಿಕೃತವಾಗಿ ರಜೆ ಹಾಕುವುದು ಉದ್ಯೋಗಿಯ ಹಕ್ಕಲ್ಲ, ದುರ್ನಡತೆ – ಹೈಕೋರ್ಟ್ Read More »

ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ

ಸಮಗ್ರ ನ್ಯೂಸ್: ತಂದೆ ತಾಯಿ ಕೌಟುಂಬಿಕ ಕಲಹದಿಂದ ಮನನೊಂದು 17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆಯನ್ನು ಮಾಡಿಕೊಂಡ ಘಟನೆ ಬೆಂಗಳೂರಿನ ಹೋಸಕೆರೆಹಳ್ಳಿಯ ಮಂಜುನಾಥ್ ನಗರದಲ್ಲಿ ಜ.1 ರಂದು ನಡೆದಿದೆ. ಮೃತ ಬಾಲಕಿ ಲೇಖನಾ (17) ಮನೆಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾಳೆ. ಲೇಖನಾ ನಿನ್ನೆ ಮಧ್ಯಾಹ್ನ ತಾಯಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಯೊಳಗೆ ನೇಣಿಗೆ ಶರಣಾಗಿದ್ದಾಳೆ. ಸಂಜೆ ಊಟಕ್ಕೆಂದು ತಾಯಿ ಮನೆಗೆ ಬಂದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಸ್ಥಳೀಯರ ನೆರವಿನಿಂದ ಆಕೆಯನ್ನು ಆಸ್ಪತ್ರೆಗೆ

ತಂದೆ ತಾಯಿ ಕೌಟುಂಬಿಕ ಕಲಹ|17 ವರ್ಷದ ಬಾಲಿಕಿ ನೇಣು ಬಿಗಿದು ಆತ್ಮಹತ್ಯೆ Read More »

ರಾಜ್ಯದ ‌12 IAS ಹಾಗೂ 48 IPS ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ರಾಜ್ಯ Australian ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು 12 ಐಎಎಸ್, 48 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಲಾಗಿದೆ. ಶಿವಮೊಗ್ಗ ಡಿಸಿಯಾಗಿದ್ದ ಗುರುದತ್ತ ಹೆಗಡೆ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಎಸ್ಪಿಯಾಗಿದ್ದ ಮಿಥುನ್ ಕುಮಾರ್ ಅವರನ್ನು ಬೆಂಗಳೂರು ಈಶಾನ್ಯ ವಿಭಾಗದ ಡಿಸಿಪಿಯಾಗಿ ನೇಮಿಸಲಾಗಿದೆ. ಇನ್ನು ಸಾಗರದ ಎಎಸ್ಪಿಯಾಗಿದ್ದ ಯತೀಶ್ ಅವರನ್ನು ಬೆಂಗಳೂರಿನ ಪಶ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕ ಮಾಡಲಾಗಿದೆ. ಕೋಲಾರದ ಎಸ್ಪಿ ನಿಖಿಲ್ ಅವರನ್ನು

ರಾಜ್ಯದ ‌12 IAS ಹಾಗೂ 48 IPS ಅಧಿಕಾರಿಗಳ ವರ್ಗಾವಣೆ Read More »

‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ

ಸಮಗ್ರ ನ್ಯೂಸ್: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಸ್ವತಃ ಭಾಗವಹಿಸಲು ಶ್ರೀಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೂ ಅವಕಾಶ ಕಲ್ಪಿಸಬೇಕು ಎಂದು ಕೋರಿ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಬುಧವಾರ ಅರ್ಜಿ ಸಲ್ಲಿಸಲಾಗಿದೆ. ‘ಈ ಪ್ರಕರಣದ ಆರೋಪಿಗಳು ಈ ಹಿಂದೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ರಿಟ್ ಅರ್ಜಿಯಲ್ಲಿ ಧರ್ಮಸ್ಥಳ ದೇವಸ್ಥಾನದ ಹೆಸರನ್ನು ಉಲ್ಲೇಖಿಸಿದ್ದರು. ಅದನ್ನು ಪರಿಗಣಿಸಿ, ಸಂತ್ರಸ್ತ ಎಂಬ ನೆಲೆಯಲ್ಲಿ ಶ್ರೀ ಕ್ಷೇತ್ರ

‘ಸಂತ್ರಸ್ತ’ ಎಂಬ ನೆಲೆಗಟ್ಟಿನಲ್ಲಿ ಧರ್ಮಸ್ಥಳ ಕ್ಷೇತ್ರದ ಪರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ Read More »

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಅರ್ಚಕ ದಂಪತಿಯ ಬಂಧನ

ಸಮಗ್ರ ನ್ಯೂಸ್: ನಿವೃತ್ತ ಪ್ರಾಂಶುಪಾಲರ ಮನೆಗೆ ಮಧ್ಯರಾತ್ರಿ ನುಗ್ಗಿ ಮನೆಯವರನ್ನು ಬೆದರಿಸಿ ಬೆಲೆಬಾಳುವ ಸೊತ್ತುಗಳನ್ನು ದೋಚಲು ಯತ್ನಿಸಿದ ಪ್ರಕರಣ ಸಂಬಂಧಿಸಿ ಪುರೋಹಿತ ಕೆಲಸ ಮಾಡುವ ಅರ್ಚಕ ಮತ್ತು ಆತನ ಪತ್ನಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತೂರು ಮುಡೂರು ನಿವಾಸಿ ಪ್ರಸ್ತುತ ಪಂಜದಲ್ಲಿ ಬಾಡಿಗೆ ಮನೆಯಲ್ಲಿರುವ ಕಾರ್ತಿಕ್ ರಾವ್ (31) ಮತ್ತು ಆತನ ಪತ್ನಿ ಕೆ.ಎಸ್ ಸ್ವಾತಿ ರಾವ್ (25) ಎಂದು ಗುರುತಿಸಲಾಗಿದೆ. ಡಿಸೆಂಬರ್ 17ರಂದು ಆರೋಪಿಗಳು ಎ.ವಿ ನಾರಾಯಣ ಮತ್ತು ಅವರ ಪತ್ನಿಯನ್ನು ಬೆದರಿಸಿ ಚಿನ್ನಾಭರಣ ಕಿತ್ತುಕೊಳ್ಳಲು

ಪುತ್ತೂರು: ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ ಅರ್ಚಕ ದಂಪತಿಯ ಬಂಧನ Read More »

ದ್ವಾದಶ ರಾಶಿಗಳ 2026ರ ವರ್ಷ ಭವಿಷ್ಯ

ಸಮಗ್ರ ನ್ಯೂಸ್: ಈ ವರ್ಷದ ಜೂನ್ ತಿಂಗಳಲ್ಲಿ ಗುರುಗ್ರಹ ತಾನು ಇದುವರೆಗೂ ಇದ್ದ ಮಿಥುನ ರಾಶಿಯನ್ನು ಬಿಟ್ಟು ಕರ್ಕರಾಶಿಯನ್ನು ಪ್ರವೇಶಿಸುತ್ತಾನೆ. ಅಕ್ಟೋಬರ್ 31 ರಂದು ಕರ್ಕದಿಂದ ಸಿಂಹರಾಶಿಗೆ ಪ್ರವೇಶಿಸಿ 2026 ಪೂರ್ತಿಯಾಗಿ ಸಿಂಹರಾಶಿಯಲ್ಲೇ ಇರುತ್ತಾನೆ. ಶನಿ ಈ ವರ್ಷ ಪೂರ್ತಿ ಮೀನರಾಶಿಯಲ್ಲೇ ಇರುತ್ತಾನೆ. ರಾಹುಕೇತುಗಳು 06-12-26 ರಂದು ತಾವು ಇದುವರೆಗೂ ಇದ್ದ ಕುಂಭ-ಸಿಂಹ ರಾಶಿಯನ್ನು ಬಿಟ್ಟು ಕಟಕ ಮಕರ ರಾಶಿಗೆ ಪ್ರವೇಶ ಮಾಡುತ್ತಾರೆ. ಈ ವರ್ಷದ ಅದೃಷ್ಟ ರಾಶಿಗಳು ವೃಷಭ, ಮಿಥುನ, ಕನ್ಯಾ, ತುಲಾ,ವೃಶ್ಚಿಕ, ಮಕರ, ಮೀನ.

ದ್ವಾದಶ ರಾಶಿಗಳ 2026ರ ವರ್ಷ ಭವಿಷ್ಯ Read More »