ಸಮಗ್ರ ನ್ಯೂಸ್: ಕೊಟ್ಟಿಗೆಹಾರ
ಮೂಡಿಗೆರೆ ತಾಲ್ಲೂಕಿನ ಬಾಳೂರು ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅಸ್ಸಾಂ ಮೂಲದ ಮಹಿಳೆಗೆ ಹೆರಿಗೆ ನೋವು ಆರಂಭವಾದ ಹಿನ್ನೆಲೆಯಲ್ಲಿ ಆಂಬುಲೆನ್ಸ್ ಮೂಲಕ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯಲ್ಲೇ ಆಂಬುಲೆನ್ಸ್ನಲ್ಲೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ತಾಯಿಗೆ ಆಂಬುಲೆನ್ಸ್ ಚಾಲಕ ಆರೀಫ್ ಸಮಯಪ್ರಜ್ಞೆ ತೋರಿಸಿ ತಾಯಿ ಮತ್ತು ಮಗುವನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ತಾಲ್ಲೂಕಿನಲ್ಲಿ ನಡೆದಿದೆ.







