ಉಡುಪಿ: ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ ನಿಧನ

ಸಮಗ್ರ ನ್ಯೂಸ್: ಬೈಂದೂರಿನ ಮಾಜಿ ಶಾಸಕ ಬನ್ನೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದುನಿಧನರಾಗಿದ್ದಾರೆ.

. Ad Widget . Ad Widget . Ad Widget

1935ರ ಡಿ.24ರದು ಬಸೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬನ್ನೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

. Ad Widget .

Leave a Comment

Your email address will not be published. Required fields are marked *