ಟಿ20 ವಿಶ್ವಕಪ್ ಕ್ರಿಕೆಟ್| ಪಾಕಿಸ್ತಾನ ಬಗ್ಗು ಬಡಿದ ಭಾರತ

ಸಮಗ್ರ ನ್ಯೂಸ್: ಆರ್.ಪ್ರೇಮದಾಸ ಕ್ರಿಕೆಟ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್‌ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ವಿರುದ್ಧ 61 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಭಾರತ ಮತ್ತೊಮ್ಮೆ ಬದ್ಧ ವೈರಿ ಪಾಕಿಸ್ತಾನ ವಿರುದ್ಧ ಗೆಲುವಿನ ನಗೆ ಬೀರಿದೆ.

Ad Widget ... ..

ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನ ಗೆಲುವಿಗೆ 176 ರನ್ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಪಾಕಿಸ್ತಾನ 18 ಒವರ್‌ಗಳಲ್ಲಿ 114 ರನ್‌ ಗಳಿಸಿ, ಪಂದ್ಯ ಕೈ ಚೆಲ್ಲಿದೆ.

Ad Widget

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ಆದರೆ, ಸ್ಫೋಟಕ ಬ್ಯಾಟಿಂಗ್ ನಡೆಸಿದ ಇಶಾನ್ ಕಿಶನ್ (77 ರನ್, 40ಎ, 4X10, 6X2) ಕಲೆಹಾಕುವ ಮೂಲಕ ಭಾರತ ಉತ್ತಮ ರನ್ ಕಲೆಹಾಕಲು ನೆರವಾದರು.

ನಂತರ ಬಂದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ ತಾಳ್ಮೆಯ ಇನಿಂಗ್ಸ್ ಆಡಿದರು. ಅಂತಿಮವಾಗಿ ಶಿವಂ ದುಬೆ ಹಾಗೂ ರಿಂಕು ಸಿಂಗ್ ಸ್ಪೋಟಕ ಬ್ಯಾಟಿಂಗ್ ಆಡುವ ಮೂಲಕ ತಂಡದ ಮೊತ್ತವನ್ನು 170ರ ಗಡಿ ದಾಟಿಸಿದರು.

ಪಾಕಿಸ್ತಾನ ಪರ ಅಮೋಘ ಬೌಲಿಂಗ್ ದಾಳಿ ನಡೆಸಿದ ಸೈಮ್ ಅಯುಬ್ 3 ವಿಕೆಟ್ ಪಡೆದು ಮಿಂಚಿದರು. ಸಲ್ಮಾನ್ ಆಘಾ, ಶಹೀನ್ ಅಫ್ರಿದಿ ಹಾಗೂ ಉಸ್ಮಾನ್ ತಾರಿಕ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡರು.

Leave a Comment

Your email address will not be published. Required fields are marked *