ಶ್ರೀಲಂಕಾ ಕರಾವಳಿಯಲ್ಲಿ ವಾಯುಭಾರ ಕುಸಿತ| ಕರ್ನಾಟಕದ ಕರಾವಳಿ, ಮಲೆನಾಡಿನಲ್ಲಿ ಹಗುರ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿಂದ ಹೈರಾಣಾಗಿರುವ ಜನರಿಗೆ ಮಳೆಯ ಸಿಂಚನವಾಗಲಿದೆ. ಮಲೆನಾಡಲ್ಲಿಯೂ 2-3 ದಿನಗಳಲ್ಲಿ ಮಳೆಯಾಗಿವ ಮುನ್ಸೂಚನೆ ಇದ್ದು, ಕಾಫಿ ಬೆಳೆಗಾರರಿಗೆ ಇದು ಸಿಹಿಸುದ್ದಿಯಾಗಿದೆ.
ಶ್ರೀಲಂಕಾ ಆಗ್ನೇಯ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಪಶ್ಚಿಮಾಭಿಮುಖವಾಗಿ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

. Ad Widget . Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕರ್ನಾಟಕದ ಉತ್ತರ ಒಳನಾಡು
ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ.

ಕರ್ನಾಟಕದ ದಕ್ಷಿಣ ಒಳನಾಡು
ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮಲೆನಾಡಾದ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ 2-3 ದಿನಗಳಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ 24 ರವೆಗೂ ಒಣಹವೆ ಇರಲಿದೆ.

Leave a Comment

Your email address will not be published. Required fields are marked *