ಬೆಳ್ತಂಗಡಿ: ಅಂಬ್ಯುಲೆನ್ಸ್ ನಲ್ಲೇ‌ ಮಗುವಿಗೆ ಜನ್ಮ ನೀಡಿದ ಮಹಿಳೆ

ಸಮಗ್ರ ನ್ಯೂಸ್: ಹೆರಿಗೆ ನೋವು ಕಾಣಿಸಿಕೊಂಡ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಆಂಬ್ಯುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ. ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನಿವಾಸಿ ಲೀಲಾವತಿ ಆಂಬುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ.

Ad Widget ... ..

ಲೀಲಾವತಿಯನ್ನು ಇಂದು ಬೆಳಗ್ಗಿನ ಜಾವ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಲೀಲಾವತಿಯನ್ನು ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಿದ್ದಾರೆ.

Ad Widget

ಅದರಂತೆ ಲೀಲಾವತಿಯನ್ನು ಇಬ್ಬರು ಶುಶ್ರೂಶಕಿಯರ ಜೊತೆಗೆ ಆಸ್ಪತ್ರೆಯ ತುರ್ತು ವಾಹನದಲ್ಲಿ ಮಂಗಳೂರಿಗೆ ಕಳುಹಿಸಿದ್ದರು. ಆಂಬುಲೆನ್ಸ್ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪಿಸುತ್ತಿದ್ದಂತೆ ಲೀಲಾವತಿಗೆ ವಿಪರೀತ ಹೆರಿಗೆ ನೋವು ಕಾಣಿಸಿಕೊಂಡಿದೆ.

ತಕ್ಷಣ ಕಾರ್ಯಪ್ರವರ್ತರಾದ ಶುಶ್ರೂಶಕಿಯರಾದ ಸಿಸ್ಟರ್ ಕುಮುದಾ ಹಾಗೂ ಸಿಸ್ಟರ್ ಸೌಮ್ಯಾ ಎಸ್. ಆಂಬುಲೆನ್ಸ್ ವಾಹನದಲ್ಲೇ ಲೀಲಾವತಿಗೆ ಹೆರಿಗೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಯಿ ಹಾಗೂ ಗಂಡು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *