ಸಮಗ್ರ ನ್ಯೂಸ್: ಸೆಮಿಫೈನಲ್ ರೇಸ್ನಲ್ಲಿ ಉಳಿಯಲು ಮಾಡು ಇಲ್ಲವೇ ಮಡಿ ಎನಿಸಿದ್ದ ಪಂದ್ಯದಲ್ಲಿ ಭಾರತ ತಂಡ ಜಿಂಬಾಬ್ವೆ ವಿರುದ್ಧ 72 ರನ್ಗಳ ಅಂತರದಿಂದ ಗೆಲುವು ಸಾಧಿಸಿದೆ. ನಿರ್ಣಾಯಕ ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ತಂಡ 256 ರನ್ಗಳ ಬೃಹತ್ ಮೊತ್ತ ದಾಖಲಿಸಿತ್ತು.
ನಂತರ ಬೌಲಿಂಗ್ನಲ್ಲೂ ಅಮೋಘ ಪ್ರದರ್ಶನ ತೋರಿ ಜಿಂಬಾಬ್ವೆ ತಂಡವನ್ನ 184 ರನ್ಗಳಿಗೆ ನಿಯಂತ್ರಿಸುವ ಮೂಲಕ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡ ಸೆಮಿಫೈನಲ್ ರೇಸ್ನಲ್ಲಿ ಉಳಿದುಕೊಂಡರೆ, ಅತ್ತ ಜಿಂಬಾಬ್ವೆ ತಂಡ ಇನ್ನೂ ಒಂದು ಪಂದ್ಯ ಇರುವಂತೆಯೇ ಟೂರ್ನಿಯಿಂದ ಹೊರಬಿದ್ದಿತು.
ಜಿಂಬಾಬ್ವೆ ಹೊರ ಬೀಳುತ್ತಿದ್ದಂತೆ ದಕ್ಷಿಣ ಆಫ್ರಿಕಾ ಮೊದಲ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿತು. ಇದೀಗ ಮಾರ್ಚ್ 1 ರಂದು ನಡೆಯಲಿರುವ ಕೊನೆಯ ಸೂಪರ್ 8 ಪಂದ್ಯದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಮತ್ತೊಂದು ಸೆಮಿಫೈನಲ್ ಸ್ಥಾನಕ್ಕೆ ಪೈಪೋಟಿ ನಡೆಸಲಿವೆ.







