ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಸಮಗ್ರ ನ್ಯೂಸ್: ರಾಜ್ಯಾದ್ಯಂತ ಇಂದಿನಿಂದ ( ಫೆಬ್ರವರಿ 28) ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭವಾಗಲಿದ್ದು, ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

Ad Widget ... ..

ಇದರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.ವಿಜ್ಞಾನ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಮತ್ತು ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

Ad Widget

ರಾಜ್ಯಾದ್ಯಂತ ಒಟ್ಟು 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪಾರದರ್ಶಕತೆಗಾಗಿ ಸಿಸಿಟಿವಿ ಮತ್ತು ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇರಿಸಲಾಗಿದೆ.

Leave a Comment

Your email address will not be published. Required fields are marked *