ಹವಾಮಾನ ವರದಿ| ರಾಜ್ಯದಲ್ಲಿ ಮುಂದುವರಿದ ಒಣಹವೆ| ತಾಪಮಾನ ಏರಿಕೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದಾದ್ಯಂತ ಇಂದು (ಮಾರ್ಚ್‌ 02) ಹವಾಮಾನವು ಒಣ ಹವೆ ಇರಲಿದೆ. ಬೇಸಿಗೆಯ ಆರಂಭದೊಂದಿಗೆ ತಾಪಮಾನ ಸಾಮಾನ್ಯಕ್ಕಿಂತಲೂ ಸ್ವಲ್ಪ ಹೆಚ್ಚಾಗಿದೆ ಎನ್ನಲಾಗಿದೆ. ಆದ್ದರಿಂದ ರಾಜ್ಯದ ಯಾವುದೇ ಭಾಗದಲ್ಲಿ ಮಳೆಯ ಸೂಚನೆ ನೀಡಲಾಗಿಲ್ಲ.

Ad Widget ... ..

ಹವಾಮಾನ ಇಲಾಖೆಯ ಇಂದಿನ ವರದಿ ಪ್ರಕಾರ, ಉತ್ತರ ಒಳನಾಡಿನಲ್ಲಿ ಉಷ್ಣಾಂಶ ಏರಿಕೆಯಾಗಲಿದೆ. ಅಲ್ಲದೇ ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

Ad Widget

ಕರ್ನಾಟಕದಲ್ಲಿ ಇಂದು ತಾಪಮಾನದಲ್ಲಿ ಏರಿಕೆ ಕಾಣುವ ನಿರೀಕ್ಷೆಯಿದೆ. ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಜ್ಯದಲ್ಲಿ ಬಹುತೇಕ ಕಡೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಯಾವುದೇ ಮಳೆಯ ಸೂಚನೆಗಳಿಲ್ಲ.

ಬೆಂಗಳೂರು: ಬೆಂಗಳೂರಿನಲ್ಲಿ ಗರಿಷ್ಠ 33-35 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ 20-22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.
ಮೈಸೂರು: ಗರಿಷ್ಠ 34-36 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ 21-23 ಡಿಗ್ರಿ ಸೆಲ್ಸಿಯಸ್‌ ಇರಲಿದೆ.
ಹುಬ್ಬಳ್ಳಿ-ಧಾರವಾಡ: ಗರಿಷ್ಠ 35-37 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ 20-22 ಡಿಗ್ರಿ ಸೆಲ್ಸಿಯಸ್‌ ಇರಲಿದೆ.
ದಕ್ಷಿಣ ಕನ್ನಡ: ಗರಿಷ್ಠ 32-34 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ 23-25 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ಮಾರ್ಚ್‌ ಆರಂಭದಿಂದಲೇ ತಾಪಮಾನ ಸಾಮಾನ್ಯಕ್ಕಿಂತಲೂ ಏರಿಕೆ ಕಾಣಲಿದೆ. ಬಿಸಿಲಿನ ತಾಪಮಾನ ಏರಿಕೆಯಿಂದಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿ ನೀರಿನ ಕೊರತೆ, ವಿದ್ಯುತ್‌ ಸಮಸ್ಯೆ, ಆರೋಗ್ಯ ಸಮಸ್ಯೆಗಳು ಕಾಣುವ ಸಾಧ್ಯತೆ ಇದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

Leave a Comment

Your email address will not be published. Required fields are marked *