ಸಮಗ್ರ ನ್ಯೂಸ್: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ T20 ವಿಶ್ವಕಪ್ ನ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ರೋಚಕವಾಗಿ ಸೋಲಿಸಿದ ಭಾರತ ತಂಡವು ಫೈನಲ್ ಗೇರಿದೆ.
ಭಾರತ ನೀಡಿದ 254 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡವು 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 246 ರನ್ ಗಳಿಸಿತು.
ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಅದರ ಫಲವಾಗಿ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 253 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಇಂಗ್ಲೆಂಡ್ ಕೂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಗುರಿ ದೊಡ್ಡದಿದ್ದರಿಂದ ಇಂಗ್ಲೆಂಡ್, ಭಾರತಕ್ಕೆ ಸುಲಭ ತುತ್ತಾಗಲಿದೆ ಎಂದು ಭಾವಿಸಲಾಗಿತ್ತು.
ಆದರೆ ಆಂಗ್ಲರ ಪರ ಕೆಚ್ಚೆದೆಯ ಬ್ಯಾಟಿಂಗ್ ಪ್ರದರ್ಶಿಸಿದ ಜೆಕಬ್ ಬೆಥೆಲ್ ಸ್ಫೋಟಕ ಶತಕ ಸಿಡಿಸಿ ಇಂಗ್ಲೆಂಡ್ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಆದರೆ ಕೊನೆಯ 4 ಓವರ್‌ಗಳಲ್ಲಿ ಪಂದ್ಯದ ದಿಕ್ಕು ಬದಲಿಸಿದ ಭಾರತದ ಬೌಲರ್ಗಳು ತಂಡವನ್ನು ರಣರೋಚಕ ಗೆಲುವಿನತ್ತ ಕೊಂಡೊಯ್ದರು.






