ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಸ್ಥಾನಗಳ ಅಭಿವೃದ್ಧಿಗೆ ಪ್ರಾಧಿಕಾರ ರಚನೆ| ರಾಜ್ಯ ಬಜೆಟ್ ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ತಮ್ಮ ದಾಖಲೆಯ 17ನೇ ಬಜೆಟ್‌ನಲ್ಲಿ ಕರಾವಳಿ ಭಾಗದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಬಿಗ್‌ ಗಿಫ್ಟ್‌ ನೀಡಿದ್ದಾರೆ. ರಾಜ್ಯದ ಅತ್ಯಂತ ಶ್ರೀಮಂತ ಹಾಗೂ ಪ್ರಸಿದ್ಧ ದೇವಾಲಯಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ಅಭಿವೃದ್ಧಿ ಪ್ರಾಧಿಕಾರಗಳನ್ನು ರಚಿಸುವುದಾಗಿ ಘೋಷಿಸಿದ್ದಾರೆ.

Ad Widget ... ..

17ನೇ ಬಜೆಟ್​​​ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರಾವಳಿಗೆ ಹೆಚ್ಚು ಮಹತ್ವ ನೀಡಿದ್ದಾರೆ. ಬಜೆಟ್​​​ ಆರಂಭದಲ್ಲಿ ಮಹತ್ವದ ಘೋಷಣೆಯನ್ನು ಮಾಡಿದ್ದಾರೆ. ರಾಜ್ಯದ ಅತಿ ಹೆಚ್ಚು ಆದಾಯ ತರುವ ಹಾಗೂ ಲಕ್ಷಾಂತರ ಭಕ್ತರು ಭೇಟಿ ನೀಡುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಗಳ ಮೂಲಸೌಕರ್ಯ ವೃದ್ಧಿಗೆ ಸರ್ಕಾರ ಮುಂದಾಗಿದೆ.

Ad Widget

ಬಜೆಟ್‌ನಲ್ಲಿ ಘೋಷಿಸಲಾದ ಈ ಪ್ರಾಧಿಕಾರಗಳು ದೇವಾಲಯಗಳ ಆಡಳಿತ ಮತ್ತು ಭಕ್ತರ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಿವೆ. ದೇವಾಲಯದ ಸುತ್ತಮುತ್ತಲಿನ ರಸ್ತೆಗಳು, ಕುಡಿಯುವ ನೀರು ಮತ್ತು ನೈರ್ಮಲ್ಯ ವ್ಯವಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವುದು.

ಭಕ್ತರ ಸೌಲಭ್ಯ: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಭಕ್ತರ ಸಂಖ್ಯೆಗೆ ಅನುಗುಣವಾಗಿ ವಸತಿ ನಿಲಯಗಳು, ಸರತಿ ಸಾಲಿನ ವ್ಯವಸ್ಥೆ ಮತ್ತು ದಾಸೋಹ ಭವನಗಳ ಆಧುನೀಕರಣ.

ಪರಿಸರ ಸಂರಕ್ಷಣೆ: ಕುಕ್ಕೆ ಸುಬ್ರಹ್ಮಣ್ಯವು ಪಶ್ಚಿಮ ಘಟ್ಟದ ಸೂಕ್ಷ್ಮ ಪ್ರದೇಶದಲ್ಲಿದೆ. ಪ್ರಾಧಿಕಾರ ರಚನೆಯಿಂದ ಇಲ್ಲಿನ ಪರಿಸರ ಸಮತೋಲನ ಕಾಪಾಡುತ್ತಾ ಪ್ರವಾಸೋದ್ಯಮ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತದೆ.

ಆಡಳಿತಾತ್ಮಕ ಪಾರದರ್ಶಕತೆ: ದೇವಾಲಯದ ಆದಾಯವನ್ನು ಸಮರ್ಪಕವಾಗಿ ಆಯಾ ಕ್ಷೇತ್ರಗಳ ಅಭಿವೃದ್ಧಿಗೇ ಬಳಸಲು ಈ ಸ್ವಾಯತ್ತ ಪ್ರಾಧಿಕಾರಗಳು ನೆರವಾಗಲಿವೆ. ಈ ಘೋಷಣೆಯು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಧಾರ್ಮಿಕ ಪ್ರವಾಸೋದ್ಯಮಕ್ಕೆ ದೊಡ್ಡ ಬಲ ನೀಡಲಿದೆ. ಹಂಪಿ ಅಥವಾ ಮಲೆ ಮಹದೇಶ್ವರ ಬೆಟ್ಟದ ಪ್ರಾಧಿಕಾರಗಳ ಮಾದರಿಯಲ್ಲಿಯೇ ಇವು ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

Leave a Comment

Your email address will not be published. Required fields are marked *