ಗ್ರಾಹಕರಿಗೆ ಬಿಗ್ ಶಾಕ್| ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ ದಿಢೀರ್ ಏರಿಕೆ|

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ಧ ಸನ್ನಿವೇಶದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 60 ರೂ. ಹೆಚ್ಚಿಸಲಾಗಿದ್ದು, ಇದರೊಂದಿಗೆ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 853 ರೂ.ನಿಂದ 913ಕ್ಕೆ ಏರಿಕೆಯಾಗಿದೆ.

. Ad Widget . Ad Widget . Ad Widget .

ಅದೇ ರೀತಿ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನೂ 115 ರೂ. ಹೆಚ್ಚಿಸಲಾಗಿದೆ. ಈ ಹೆಚ್ಚಳದ ಬಳಿಕ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 1,883 ಆಗಿದ್ದು, ಮುಂಬೈನಲ್ಲಿ 1,835ಕ್ಕೆ ತಲುಪಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಈ ನಡುವೆ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ಜಾಗತಿಕ ಇಂಧನ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ.

Leave a Comment

Your email address will not be published. Required fields are marked *