ಸಮಗ್ರ ನ್ಯೂಸ್: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ 12 ನೂತನ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ರಾಜ್ಯಸರ್ಕಾರ ಮುಂದಾಗಿದೆ. ಅದರಲ್ಲಿ ದಕ್ಷಿಣಕನ್ನಡ ಜಿಲ್ಲೆಗೆ ಎರಡು ಪೊಲೀಸ್ ಠಾಣೆ ದೊರೆಯಲಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಜನಸಂಖ್ಯೆ ಹೆಚ್ಚಳ , ನಗರೀಕರಣ ಮತ್ತು ಕೈಗಾರಿಕಾ ವಲಯಗಳ ವಿಸ್ತರಣೆ ಹಿನ್ನೆಲೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ಉದ್ದೇಶದಿಂದ ಹೊಸ ಠಾಣೆಗಳನ್ನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿದೆ . ಇದರಿಂದ ಸ್ಥಳೀಯ ಮಟ್ಟದಲ್ಲಿ ಅಪರಾಧ ನಿಯಂತ್ರಣ , ಸಂಚಾರ ವ್ಯವಸ್ಥೆಯ ಸುಧಾರಣೆ ಹಾಗೂ ಸಾರ್ವಜನಿಕರಿಗೆ ತ್ವರಿತ ಪೊಲೀಸ್ ಸೇವೆ ಒದಗಿಸಲು ಅನುಕೂಲವಾಗಲಿದೆ .
ಈ ಪೈಕಿ ದ.ಕ ಜಿಲ್ಲೆಗೆ ಎರಡು ಹೊಸ ಪೊಲೀಸ್ ಠಾಣೆಗಳು ಮಂಜೂರಾಗಿವೆ. ಮಾಣಿ ಮತ್ತು ಸಜಿಪನಡು ಪ್ರದೇಶಗಳಲ್ಲಿ ಹೊಸ ಠಾಣೆಗಳು ಆರಂಭವಾಗಲಿದ್ದು, ಈ ಭಾಗದ ಜನರಿಗೆ ಪೊಲೀಸ್ ಸೇವೆಗಳು ಇನ್ನಷ್ಟು ಸುಲಭವಾಗಿ ಲಭ್ಯವಾಗಲಿವೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಾಣಿ ಹಾಗೂ ಸಜಿಪನಡು ಪೊಲೀಸ್ ಠಾಣೆಗಳು ಸ್ಥಾಪನೆಯಾಗಲಿವೆ.







