ಮಾತುಕತೆ ಮೂಲಕ ಯುದ್ಧ ನಿಲ್ಲಿಸಿ: ಭಾರತ ಕರೆ

ಸಮಗ್ರ‌ ನ್ಯೂಸ್: ‘ಭಾರತ ಶಾಂತಿಯನ್ನು ಬೆಂಬಲಿಸುತ್ತದೆ. ಯುದ್ಧಗ್ರಸ್ತವಾಗಿರುವ ಅಮೆರಿಕ-ಇಸ್ರೇಲ್‌ ಹಾಗೂ ಇರಾನ್‌ ದೇಶಗಳಿಗೆ ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳುವಂತೆ ಒತ್ತಾಯಿಸುತ್ತದೆ. ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂಯಮ ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದನ್ನು ನಾವು ಪ್ರತಿಪಾದಿಸುತ್ತೇವೆ’ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್‌ ಸೋಮವಾರ ತಿಳಿಸಿದ್ದಾರೆ.

Ad Widget ... ..

ಸಂಸತ್‌ ಅಧಿವೇಶನದಲ್ಲಿ ಉಭಯ ಸದನಗಳಲ್ಲಿ ಮಾತನಾಡಿದ ಅವರು, ‘ಉದ್ವಿಗ್ನತೆಯನ್ನು ಕಡಿಮೆ ಮಾಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಅನುಸರಿಸಬೇಕು ಎಂದು ನಾವು ನಂಬಿದ್ದೇವೆ. ಮುಂದೆಯೂ ನಂಬುತ್ತೇವೆ. ಭಾರತ ಶಾಂತಿಯನ್ನು ಬೆಂಬಲಿಸುತ್ತದೆ. ಮಾತುಕತೆ ಮತ್ತು ರಾಜತಾಂತ್ರಿಕತೆಗೆ ಮರಳುವಂತೆ ಒತ್ತಾಯಿಸುತ್ತದೆ. ಉದ್ವಿಗ್ನತೆ ಕಡಿಮೆ ಮಾಡುವುದು ಮತ್ತು ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದನ್ನು ನಾವು ಪ್ರತಿಪಾದಿಸುತ್ತೇವೆ’ ಎಂದರು.

Ad Widget

ಯುದ್ಧಗ್ರಸ್ತ ದೇಶಗಳೊಂದಿಗೆ ಸಂಪರ್ಕ:’ ಯುದ್ಧಪೀಡಿತ ದೇಶಗಳಲ್ಲಿ ಭಾರತೀಯರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ನಾನು ಈ ದೇಶಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇನೆ. ಅಮೆರಿಕದ ಜೊತೆ ರಾಜತಾಂತ್ರಿಕ ಮಾರ್ಗಗಳ ಮೂಲಕ ನಿಯಮಿತ ಸಂಪರ್ಕ ಕಾಯ್ದುಕೊಂಡಿದ್ದೇವೆ. ಆದರೆ ಇರಾನ್‌ನೊಂದಿಗೆ ನಾಯಕತ್ವ ಮಟ್ಟದಲ್ಲಿ ಸಂಪರ್ಕ ಸಾಧಿಸುವುದು ಈ ಸಮಯದಲ್ಲಿ ಕಷ್ಟಕರ. ಆದರೂ ಫೆ.28 ಮತ್ತು ಮಾ.5ರಂದು ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ ಅವರೊಂದಿಗೆ ಮಾತನಾಡಿದ್ದೇನೆ. ಮುಂದೆಯೂ ಮಾತುಕತೆಯನ್ನು ಮುಂದುವರಿಸುತ್ತೇನೆ’ ಎಂದು ತಿಳಿಸಿದರು.

ವಿದೇಶಾಂಗ ಸಚಿವಾಲಯ ಮತ್ತು ಪಶ್ಚಿಮ ಏಷ್ಯಾ ದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳು ಅಲ್ಲಿನ ಭಾರತೀಯ ನಾಗರಿಕರಿಗೆ ನಿಯಮಿತವಾಗಿ ಸಲಹೆಗಳನ್ನು ನೀಡುತ್ತಿವೆ. ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸುವಂತೆ ಮತ್ತು ಈಗಾಗಲೇ ಅಲ್ಲಿರುವವರು ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡುತ್ತಿವೆ. ಯುದ್ಧಪೀಡಿತ ಪ್ರದೇಶಗಳಿಂದ ಈಗಾಗಲೇ 67,000 ಭಾರತೀಯರನ್ನು ಕರೆತಂದಿದ್ದೇವೆ’ ಎಂದರು.

Leave a Comment

Your email address will not be published. Required fields are marked *