ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, ಅಂತಾರಾಷ್ಟ್ರೀಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಅಮೆರಿಕಾ ಮತ್ತು ಇಸ್ರೇಲ್ ವಿರುದ್ಧದ ಸಂಘರ್ಷದಲ್ಲಿ ಇರಾನ್ ದೇಶಕ್ಕೆ ಉತ್ತರ ಕೊರಿಯಾ ತನ್ನ ಅಧಿಕೃತ ಬೆಂಬಲವನ್ನು ಘೋಷಿಸಿದೆ.
ಇರಾನ್ ಪರ ಕಿಮ್ ಜಾಂಗ್ ಉನ್ ಬ್ಯಾಟಿಂಗ್ ಅಮೆರಿಕಾ ಮತ್ತು ಇಸ್ರೇಲ್ ದೇಶಗಳು ಇರಾನ್ ಮೇಲೆ ನಡೆಸುತ್ತಿರುವ ವಾಗ್ದಾಳಿ ಹಾಗೂ ಸಂಘರ್ಷದ ಹಾದಿಯನ್ನು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತೀವ್ರವಾಗಿ ಖಂಡಿಸಿದ್ದಾರೆ.
ಇರಾನ್‌ನ ಸಾರ್ವಭೌಮತ್ವದ ಮೇಲೆ ನಡೆಯುತ್ತಿರುವ ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ ಎಂದು ಕಿಮ್ ತಿಳಿಸಿದ್ದು, ಸಂಕಷ್ಟದ ಸಮಯದಲ್ಲಿ ತಾವು ಇರಾನ್ ಜೊತೆಗೆ ಇರುವುದಾಗಿ ಹೇಳಿದ್ದಾರೆ.







