ರಾಜ್ಯದಾದ್ಯಂತ ಬಿಸಿಲ‌ಝಳ ಹೆಚ್ಚಳ| ಮಾ.15ರಿಂದ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಿಸಿಲು ಹೆಚ್ಚಾಗುತ್ತಿದೆ. ಮುಂದಿನ ವಾರದಿಂದ ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಆದರೆ, ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Ad Widget ... ..

ಬಂಗಾಳಕೊಲ್ಲಿಯ ನೈಋತ್ಯ ಮತ್ತು ಶ್ರೀಲಂಕಾದ ಉತ್ತರ ಭಾಗದಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ಎತ್ತರದಲ್ಲಿ ಮೇಲ್ಮಟ್ಟದ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿದೆ. ದಕ್ಷಿಣ ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಪಕ್ಕದಲ್ಲಿರುವ ಉತ್ತರ ಭಾಗದಿಂದ ಕರ್ನಾಟಕದ ದಕ್ಷಿಣ ಒಳನಾಡಿನವರೆಗಿನ ಚಂಡಮಾರುತದ ಪರಿಚಲನೆ ಕಡಿಮೆಯಾಗಿದೆ. ಇನ್ನು ಲಕ್ಷದ್ವೀಪದ ಪೂರ್ವದಲ್ಲಿ 75°E ಉದ್ದಕ್ಕೂ ಅಕ್ಷಾಂಶ 6°N ನ ಉತ್ತರಕ್ಕೆ ತಗ್ಗು ಪ್ರದೇಶವು ಪಶ್ಚಿಮಕ್ಕೆ ಚಲಿಸಿದೆ ಹೀಗಾಗಿ, ಕರ್ನಾಟಕದಾದ್ಯಂತ 7 ದಿನಗಳ ಅವಧಿಗೆ ಬಹುತೇಕ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ. ಆದರೆ ಇದೇ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Ad Widget

ಇನ್ನು ಕರ್ನಾಟಕದ ವಿವಿಧ ಭಾಗದಲ್ಲಿ ಈ ವಾರದಿಂದ ಮಳೆ ಪ್ರಾರಂಭವಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಮಾರ್ಚ್ 15ರಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಉಡುಪಿಯಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Leave a Comment

Your email address will not be published. Required fields are marked *