ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆಯೇ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ನಡುವಿನ ಮಾತುಕತೆಯ ನಂತರ, ಆಯಕಟ್ಟಿನ ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ತೈಲ ಹಡಗುಗಳು ಸಾಗಲು ಇರಾನ್ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಭಾರತದ ಕಚ್ಚಾ ತೈಲ ಮತ್ತು ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳುವುದು ಈ ಮಾತುಕತೆಯ ಮುಖ್ಯ ಉದ್ದೇಶವಾಗಿತ್ತು. ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ನಡುವಿನ ಮಾತುಕತೆಯ ನಂತರ, ಆಯಕಟ್ಟಿನ ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ತೈಲ ಹಡಗುಗಳು ಸಾಗಲು ಇರಾನ್ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಅಮೆರಿಕ, ಯುರೋಪ್ ಮತ್ತು ಇಸ್ರೇಲ್‌ಗೆ ಸಂಬಂಧಿಸಿದ ಹಡಗುಗಳಿಗೆ ಈ ಮಾರ್ಗದಲ್ಲಿ ನಿರ್ಬಂಧ ಹೇರಲಾಗಿದ್ದರೂ, ಭಾರತದ ಹಡಗುಗಳಿಗೆ ಇರಾನ್ ಮುಕ್ತ ಅವಕಾಶ ನೀಡಿದೆ. ಇದೇ ವಿಷಯವಾಗಿ ಜೈಶಂಕರ್ ಅವರು ರಷ್ಯಾದ ಸರ್ಗೆ ಲಾವ್ರೊವ್ ಮತ್ತು ಫ್ರಾನ್ಸ್‌ನ ಜೀನ್-ನೋಯೆಲ್ ಬ್ಯಾರೋಟ್ ಅವರೊಂದಿಗೂ ಚರ್ಚೆ ನಡೆಸಿದ್ದಾರೆ.







