ಹವಾಮಾನ ವರದಿ| ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Ad Widget ... ..

ಮಾರ್ಚ್ 16 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ. 21ರಂದು ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಚಿಕ್ಕಮಗಳೂರು ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

Ad Widget

ಕೊಪ್ಪಳ, ವಿಜಯಪುರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದ್ದು, ಮುಂದಿನ 2 ದಿನಗಳು ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮಾ.18 ರಿಂದ ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ವರ್ಷಧಾರೆಯಾಗುವ ನಿರೀಕ್ಷೆಯಿದೆ. ಅಲ್ಲದೆ ಮಾ. 19 ರಿಂದ ಚಿತ್ರದುರ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರಗಿ, ರಾಯಚೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

Leave a Comment

Your email address will not be published. Required fields are marked *