ಸ್ಪೀಕರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡ

ಸಮಗ್ರ ನ್ಯೂಸ್: ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಸಿಟ್ಟಿಗೆ ಮೂವರು ಅಧಿಕಾರಿಗಳ ತಲೆದಂಡವಾಗಿದೆ ಕಂದಾಯ ಇಲಾಖೆ ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯೂಡಿ ಅಧಿಕಾರಿಗಳ ತಲೆದಂಡ ಆಗಿದ್ದು ಮೂರು ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.

Ad Widget ... ..

ಉತ್ತರ ಒದಗಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಯುಟಿ ಖಾದರ್ ಸಿಟ್ಟಿಗೆ ಇದೀಗ 3 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಮೂವರು ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದು ಉತ್ತರ ಒದಗಿಸದ ಹಿನ್ನೆಲೆ ಇಲಾಖೆಗಳ ಹಿರಿಯ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

Ad Widget

ಪಿಡಬ್ಲ್ಯೂಡಿ ಇಲಾಖೆ, ಪಶು ಸಂಗೋಪನೆ, ಸಾರಿಗೆ, ಐಟಿಬಿಟಿ ಡಿಪಿಎಆರ್ ಹಾಗೂ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನೋಟಿಸ್ ನೀಡಲಾಗಿದೆ. ಸ್ಪೀಕರ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನೋಟಿಸ್ ನೀಡಲು ಸೂಚನೆ ನೀಡಿದ್ದಾರೆ. ಸರಿಯಾದ ಉತ್ತರ ನೀಡದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಸಿಎಂ ಸೂಚನೆಯ ಹಿನ್ನೆಲೆ ಮಧ್ಯಾಹ್ನ 2 ಗಂಟೆಗೆ ಸಿಎಸ್ ಶಾಲಿನಿ ರಜನಿಶ್ ಸಭೆ ಕರೆದಿದ್ದಾರೆ.

Leave a Comment

Your email address will not be published. Required fields are marked *