ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ

ಸಮಗ್ರ ನ್ಯೂಸ್: ಇಂದಿನಿಂದ ರಾಜ್ಯದಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ (SSLC Exam) ಆರಂಭವಾಗಲಿದ್ದು, ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ.

Ad Widget ... ..

ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಗೆ ಆರಂಭವಾಗುತ್ತವೆ. ಅದಕ್ಕೂ ಮೊದಲು ವಿದ್ಯಾರ್ಥಿಗಳಿಗೆ 15 ನಿಮಿಷಗಳ ಓದುವ ಸಮಯ ನೀಡಲಾಗುತ್ತದೆ. ಈ ಸಮಯದಲ್ಲಿ ಪ್ರಶ್ನೆ ಪತ್ರಿಕೆಯನ್ನು ಗಮನವಾಗಿ ಓದಿ, ಉತ್ತರಗಳನ್ನು ಹೇಗೆ ಬರೆಯಬೇಕು ಎಂಬುದನ್ನು ಯೋಜಿಸಿಕೊಳ್ಳಬಹುದು. ಪರೀಕ್ಷೆ ಮಧ್ಯಾಹ್ನ 1:15ರವರೆಗೆ ನಡೆಯುತ್ತದೆ. ವಿದ್ಯಾರ್ಥಿಗಳು ಬೆಳಿಗ್ಗೆ 9:45ರೊಳಗೆ ಪರೀಕ್ಷಾ ಕೇಂದ್ರ ತಲುಪಿದರೆ ಯಾವುದೇ ಗಡಿಬಿಡಿ ಇಲ್ಲದೆ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಸಾಧ್ಯವಾಗುತ್ತದೆ.

Ad Widget

ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಶಾಲಾ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು. ಸರಳ ಮತ್ತು ಸ್ವಚ್ಛವಾದ ಉಡುಪು ಧರಿಸುವುದು ಮುಖ್ಯವಾಗಿದೆ. ಇದು ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳನ್ನು ಸುಲಭವಾಗಿ ಗುರುತಿಸಲು ಸಹಕಾರಿಯಾಗುತ್ತದೆ. ಪರೀಕ್ಷೆಗೆ ಬೇಕಾದ ಎಲ್ಲಾ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿಕೊಳ್ಳುವುದು ಉತ್ತಮ.

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಹಾಲ್ ಟಿಕೆಟ್ ಅನ್ನು ತಪ್ಪದೇ ತೆಗೆದುಕೊಂಡು ಹೋಗಬೇಕು. ಅದಿಲ್ಲದೆ ಪರೀಕ್ಷಾ ಕೊಠಡಿಗೆ ಪ್ರವೇಶ ನೀಡುವುದಿಲ್ಲ. ಜೊತೆಗೆ ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನುಗಳು, ರೇಖಾಗಣಿತ ಪೆಟ್ಟಿಗೆ, ಪಾರದರ್ಶಕ ನೀರಿನ ಬಾಟಲ್ ಹಾಗೂ ಅಗತ್ಯವಾದ ಇತರೆ ಲೇಖನ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗಬಹುದು. ಈ ಎಲ್ಲಾ ವಸ್ತುಗಳನ್ನು ಮುಂಚಿತವಾಗಿ ಸಿದ್ಧಪಡಿಸಿದರೆ ಪರೀಕ್ಷೆಯ ದಿನ ಒತ್ತಡ ಕಡಿಮೆಯಾಗುತ್ತದೆ.

2026ನೇ ಮಾರ್ಚ್ 18 ರಿಂದ ಎಸ್.ಎಸ್.ಎಲ್.ಸಿ (SSLC) ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು (Siddaramaiah) ಸದನದಲ್ಲಿ (Budget Session) ಶುಭಾಶಯ ಕೋರಿದರು.

ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ ಎರಡನೇ ಹಂತ, ಮೂರನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೆ ಪರೀಕ್ಷೆಯನ್ನು ಎದುರಿಸುವಂತೆ ತಿಳಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯಲು ತಿಳಿಸಿದರು.

Leave a Comment

Your email address will not be published. Required fields are marked *