ಹವಾಮಾನ ವರದಿ| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ|‌ ರಾಜ್ಯಾದ್ಯಂತ 4 ದಿನ ಗುಡುಗು ಸಹಿತ ಮಳೆ‌ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದಾದ್ಯಂತ ಇಂದಿನಿಂದ 4 ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Ad Widget ... ..

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು ನಗರ ಮತ್ತು ಗ್ರಾಮಾಂತರ, ತುಮಕೂರು, ದಾವಣಗೆರೆ, ಬೆಳಗಾವಿ, ಬೀದರ್ ಹಾಗೂ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ.

Ad Widget

ರಾಜ್ಯದ ಹಲವೆಡೆ ಹವಾಮಾನ ಬದಲಾವಣೆಯಿಂದಾಗಿ ಮಳೆಯಾಗುತ್ತಿದ್ದು, ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಮಂಗಳವಾರ ಸಂಜೆ ಸುರಿದ ಭಾರಿ ಆಲಿಕಲ್ಲು ಮಳೆ ಜನರನ್ನು ಅಚ್ಚರಿಗೀಡು ಮಾಡಿದೆ. ಮಳೆಯ ತೀವ್ರತೆಗೆ ರಸ್ತೆಗಳೆಲ್ಲಾ ಮಂಜುಗಡ್ಡೆಯಿಂದ ಆವೃತವಾಗಿದ್ದು, ನೋಡುಗರಿಗೆ ಇದು ‘ಕಾಶ್ಮೀರ’ ಎಂಬಂತೆ ಭಾಸವಾಯಿತು.

ಕಲಘಟಗಿಯಿಂದ ಮಾಚಾಪುರಕ್ಕೆ ಹೋಗುವ ರಸ್ತೆಯಲ್ಲಿ ಭಾರಿ ಪ್ರಮಾಣದ ಆಲಿಕಲ್ಲುಗಳು ಸಂಗ್ರಹಗೊಂಡಿದ್ದರಿಂದ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ನಂತರ ಜೆಸಿಬಿ ಯಂತ್ರಗಳ ಮೂಲಕ ಮಂಜುಗಡ್ಡೆಯನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Leave a Comment

Your email address will not be published. Required fields are marked *