ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ| ಮಿನಿ‌ ಕಾಶ್ಮೀರದಂತಾದ ರಸ್ತೆಗಳು

ಸಮಗ್ರ ನ್ಯೂಸ್: ಕಳೆದ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ವರುಣನ ಅಬ್ಬರ ತುಸು ಹೆಚ್ಚಾಗಿದ್ದರೆ, ಉತ್ತರ ಒಳನಾಡಿನ ಕೆಲವೇ ಕೆಲವು ಪ್ರದೇಶಗಳಲ್ಲಿ ಮಳೆ ವರದಿಯಾಗಿದೆ. ರಾಜ್ಯದ ವಿವಿಧೆಡೆ ಹಗುರದಿಂದ ಸಾಧಾರಣ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಹವಾಮಾನ ತಂಪಾಗಿದೆ.

Ad Widget ... ..

ಕೆಲವೆಡೆ ಆಲಿಕಲ್ಲು ಮಳೆಯಾಗಿದ್ದು, ಈ ವಿಡಿಯೋಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಜನ ಹಂಚಿಕೊಂಡು ಖುಷಿಪಟ್ಟಿದ್ದಾರೆ. ಈ ವಾರವಿಡೀ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ.

Ad Widget

ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದ್ದು, ವಿವಿಧೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ. ರಾಮನಗರ ಜಿಲ್ಲೆಯ ಬಿಡದಿ, ಬೆಂಗಳೂರು ಗ್ರಾಮಾಂತರದ ದೇವನಹಳ್ಳಿ, ಧಾರವಾಡದ ಕಲಘಟಗಿ, ಚಿಕ್ಕಬಳ್ಳಾಪುರ, ವಿಜಯಪುರದ ಮುದ್ದೇಬಿಹಾಳ, ಹಾಸನ ಹಾಗೂ ಕಲಬುರಗಿಯ ಆಳಂದ ಸೇರಿದಂತೆ ಹಲವು ಭಾಗಗಳಲ್ಲಿ ಆಲಿಕಲ್ಲುಗಳ ಸುರಿಮಳೆಯಾಗಿದೆ. ರಸ್ತೆಗಳು, ಮನೆಗಳ ಮೇಲ್ಛಾವಣಿ ಹಾಗೂ ತೋಟಗಳು ಸಂಪೂರ್ಣವಾಗಿ ಬಿಳಿ ಆಲಿಕಲ್ಲುಗಳಿಂದ ಆವೃತವಾಗಿದ್ದು, ಕರ್ನಾಟಕದ ಈ ಭಾಗಗಳು ನೋಡಲು ‘ಮಿನಿ ಕಾಶ್ಮೀರ’ದಂತೆ ಭಾಸವಾಗುತ್ತಿವೆ. ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರಿಗೆ ಈ ಮಳೆ ತಂಪೆರೆದಿದ್ದರೂ, ಆಲಿಕಲ್ಲುಗಳ ಅಬ್ಬರಕ್ಕೆ ಸಾರ್ವಜನಿಕರು ಅಚ್ಚರಿಗೊಂಡಿದ್ದಾರೆ.

ಈ ಅಪರೂಪದ ದೃಶ್ಯಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಜನರು ಆಲಿಕಲ್ಲುಗಳನ್ನು ಕೈಯಲ್ಲಿ ಹಿಡಿದು ಸಂಭ್ರಮಿಸುತ್ತಿರುವ ಮತ್ತು ರಸ್ತೆಗಳಲ್ಲಿ ಮಂಜಿನಂತೆ ಹರಡಿರುವ ಆಲಿಕಲ್ಲುಗಳ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ರೀತಿಯ ಗುಡುಗು ಸಹಿತ ಮಳೆ ಮುಂದುವರಿಯುವ ಸಾಧ್ಯತೆಯಿದೆ.

ರಾಜ್ಯದ ಮಳೆ ಪ್ರಮಾಣವನ್ನು ಗಮನಿಸಿದರೆ, ಹಾಸನ ಮತ್ತು ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ಗರಿಷ್ಠ ತಲಾ 5 ಸೆಂ.ಮೀ ಮಳೆಯಾಗಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 4 ಸೆಂ.ಮೀ ಹಾಗೂ ಧರ್ಮಸ್ಥಳದಲ್ಲಿ 3 ಸೆಂ.ಮೀ ಮಳೆ ದಾಖಲಾಗಿದೆ. ಅದೇ ರೀತಿ ದಾವಣಗೆರೆ ನಗರದಲ್ಲಿ 3 ಸೆಂ.ಮೀ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ.

Leave a Comment

Your email address will not be published. Required fields are marked *