ಪುತ್ತೂರು: ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ‌ಅಧಿಕೃತ ಆದೇಶ| ಸೇಡಿಯಾಪುನಲ್ಲಿ ಸ್ಥಾಪನೆಯಾಗಲಿದೆ ಸುಸಜ್ಜಿತ ಆಸ್ಪತ್ರೆ

ಸಮಗ್ರ ನ್ಯೂಸ್: ಪುತ್ತೂರಿನ ಜನತೆಯ ಬಹುಕಾಲದ ಬೇಡಿಕೆಯಾಗಿದ್ದ ಮೆಡಿಕಲ್ ಕಾಲೇಜು ನಿರ್ಮಾಣವಾಗುವಲ್ಲಿ ಸರಕಾರದಿಂದ ಅಧಿಕೃತ ಆದೇಶ ಹೊರಬಿದ್ದಿದೆ. ಸೇಡಿಯಾಪಿನಲ್ಲಿ ಕಾಯ್ದಿರಿಸಲಾಗಿರುವ ೪೦ ಎಕ್ರೆ ಜಾಗದಲ್ಲಿ 300 ಬೆಡ್‌ನ ಮೆಡಿಕಲ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನವನ್ನು ಒದಗಿಸುವುದರ ಜೊತೆಗೆ ಕಟ್ಟಡದ ರೂಪುರೇಶೆಗಳ ಬಗ್ಗೆಯೂ ಸರಕಾರದದ ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಅಂತಿಮ ಮುದ್ರೆ ಬಿದ್ದಿದೆ.

Ad Widget ... ..

2025-26ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-138 ರಲ್ಲಿ ‘ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ಘೋಷಿಸಲಾಗಿರುತ್ತದೆ.

Ad Widget

ಆಯವ್ಯಯ ಘೋಷಣೆಯಂತೆ ಪುತ್ತೂರಿನ 100 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನು 300 ಹಾಸಿಗೆಗಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೇಗೇರಿಸುವ ಸಂಬಂಧ ಮುಖ್ಯ ಇಂಜಿನಿಯರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜನಿಯರಿಂಗ್ ಘಟಕ, ಬೆಂಗಳೂರು ಇವರು ಸಲ್ಲಿಸಿದ್ದ ಅಂದಾಜು ಪಟ್ಟಿಯ ಪ್ರಸ್ತಾವನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆರ್ಥಿಕ ಇಲಾಖೆಯ ಅಭಿಪ್ರಾಯದೊಂದಿಗೆ ಪರಿಶೀಲಿಸಿದ ನಂತರ, ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಯೋಜನೆ ಪ್ರಸ್ತುತ ಸ್ಥಳದಲ್ಲಿ ಕಾರ್ಯಸಾಧ್ಯವಾಗುವುದಿಲ್ಲ, ವೈದ್ಯಕೀಯ ಕಾಲೇಜು ಆಸ್ಪತ್ರೆಯ ಸ್ಥಳ, ನಿರ್ಮಾಣ ಮತ್ತು ಕಾರ್ಯಸಾಧ್ಯತೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲವಾದ್ದರಿಂದ ಪೂತ್ತೂರಿನಲ್ಲಿ, 300 ಹಾಸಿಗೆಗಳ ಆಸ್ಪತ್ರೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಯ ಮುಖಾಂತರ ಹೊಸ ಸ್ಥಳದಲ್ಲಿ ನಿರ್ಮಿಸಲು, ಆರ್ಥಿಕ ಇಲಾಖೆಯು ಸೂಚನೆಯಂತೆ, ಸರ್ಕಾರದ ಆದೇಶದಂತೆ ಸದರಿ ಆಯವಯ ಘೋಷಣೆಯನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ವರ್ಗಾಯಿಸಲಾಗಿರುತ್ತದೆ.

ಮೇಲೆ ಓದಲಾದ ಏಕ ಕಡತದ ಪ್ರಸ್ತಾವನೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬನ್ನೂರು ಗ್ರಾಮದ ಸೇಡಿಯಾವು ಇಲ್ಲಿ, 300 ಹಾಸಿಗೆಗಳ ಬೋಧನಾ ಆಸ್ಪತ್ರೆಯನ್ನು ನಿರ್ಮಿಸುವ ಸಂಬಂಧ ಮುಖ್ಯ ಇಂಜಿನಿಯರ್ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಘಟಕ, ಬೆಂಗಳೂರು ಇವರು ಕಾಮಗಾರಿಯ ರೂ.೧೮೦.೦೦ ಕೋಟಿ ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಿದ್ದು ಆಡಳಿತಾತ್ಮಕ ಅನುಮೋದನೆ ಕೋರಿರುತ್ತಾರೆ.ಮುಖ್ಯ ಇಂಜಿನಿಯರ್, ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆಯ ಇಂಜಿನಿಯರಿಂಗ್ ಘಟಕ, ಬೆಂಗಳೂರು ಇವರ ಪ್ರಸ್ತಾವನೆಯಲ್ಲಿ ಕಂದಾಯ ಇಲಾಖೆಯಿಂದ ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ಸೇಡಿಯಾವು ಬಳಿ ಜಾಗವನ್ನು ಗುರುತಿಸಿ, ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು/ ಆಸ್ಪತ್ರೆ ಸ್ಥಾಪಿಸುವ ಉದ್ದೇಶಕ್ಕೆ ಮೀಸಲಿರಿಸಿದ ಜಾಗದಲ್ಲಿ ಸದರಿ ಯೋಜನೆಯನ್ನು ಪ್ರಸ್ತಾಪಿಸಲಾಗಿರುತ್ತದೆ. ಹೊಸ ಹಾಸ್ಪಿಟಲ್ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆಯೂ ಮುಗಿದಿರುತ್ತದೆ.

Leave a Comment

Your email address will not be published. Required fields are marked *