ಸರ್ಕಾರಿ ಉದ್ಯೋಗಿಗಳಿಗಿಲ್ಲ ಯುಗಾದಿ ರಜೆ| ಕಡ್ಡಾಯ ಹಾಜರಾತಿ ಕುರಿತು ನೊಟೀಸ್ ಜಾರಿ

ಸಮಗ್ರ ನ್ಯೂಸ್: ಯುಗಾದಿ ಹಬ್ಬದ ಸಂಭ್ರಮದ ನಡುವೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಹಬ್ಬದ ರಜೆ ಇಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ವಿಧಾನಸಭೆ ಅಧಿವೇಶನಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸುವ ಅಗತ್ಯದ ಹಿನ್ನೆಲೆಯಲ್ಲಿ, ಹಬ್ಬದ ದಿನವೂ ಕಡ್ಡಾಯವಾಗಿ ಕಚೇರಿಗೆ ಹಾಜರಾಗುವಂತೆ ಕಂದಾಯ ಇಲಾಖೆ ಸೂಚಿಸಿದೆ.

Ad Widget ... ..

ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರ ನಿರ್ದೇಶನದಂತೆ, ಮಾರ್ಚ್ 23, 2026ರಂದು ವಿಧಾನಸಭೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಪ್ರಶ್ನೆಗಳು ಚರ್ಚೆಗೆ ಬಾಕಿ ಇರುವುದರಿಂದ, ಅವುಗಳಿಗೆ ಸಮರ್ಪಕ ಉತ್ತರ ನೀಡಲು ಪೂರ್ವ ಸಿದ್ಧತೆ ಅಗತ್ಯವಿದೆ ಎಂದು ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾರ್ಚ್ 19ರಂದು ಯುಗಾದಿ ಹಬ್ಬದ ದಿನವೂ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗುವಂತೆ ಆದೇಶಿಸಲಾಗಿದೆ.

Ad Widget

ಈ ಸೂಚನೆಯು ಕಂದಾಯ ಇಲಾಖೆಯ ಒಂಬತ್ತು ಪ್ರಮುಖ ಶಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ. ಮುಜರಾಯಿ, ಭೂ ಮಂಜೂರಾತಿ-1, ಭೂ ಮಂಜೂರಾತಿ-2, ಭೂ ಮಂಜೂರಾತಿ-3, ಸೇವೆಗಳು-3, ಭೂ ಕಂದಾಯ, ಭೂ ಮಾಪನ, ಭೂಮಿ ಹಾಗೂ ಭೂಸುಧಾರಣಾ ಕೋಶ ಸೇರಿದಂತೆ ವಿವಿಧ ವಿಭಾಗಗಳಿಗೆ ಸೇರಿದ ಸಿಬ್ಬಂದಿಗಳು ಕಚೇರಿಗೆ ಹಾಜರಾಗಿ ವಿಧಾನಸಭೆಯ ಬಾಕಿ ಪ್ರಶ್ನೆಗಳಿಗೆ ಉತ್ತರ ಸಿದ್ಧಪಡಿಸುವಂತೆ ಸೂಚಿಸಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ಕಲಾವತಿ ಎಸ್‌.ಎನ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

Leave a Comment

Your email address will not be published. Required fields are marked *