ಹವಾಮಾನ ವರದಿ| ಇಂದೂ ರಾಜ್ಯಾದ್ಯಂತ ಗುಡುಗು ಸಹಿತ ಮಳೆ‌ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಿದ್ದು ರೈತರ ಆತಂಕ ಹೆಚ್ಚಿಸಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಎಚ್ಚರಿಕೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಕೂಡಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.

Ad Widget ... ..

ಯುಗಾದಿ ಹಬ್ಬದ ತಯಾರಿ, ಖರೀದಿ ನಡುವೆ ನಿನ್ನೆ (ಮಾ.18) ಸಂಜೆ ಬೆಂಗಳೂರಿನಲ್ಲಿ ಮಳೆಯಾಗಿತ್ತು. ಇದೀಗ ವ್ಯಾಪಾರಕ್ಕೂ ಸಮಸ್ಯೆಯಾಗಿತ್ತು. ಇಂದು ಯುಗಾದಿ ಹಬ್ಬದ ಸಂಭ್ರಕ್ಕೆ ಮಳೆಯಾರ ತಂಪೆರೆಯಲಿದ್ದಾರೆ. ಆದರೆ ಕರ್ನಾಟಕದ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

Ad Widget

ಕರ್ನಾಟಕದ ಹಲವು ಜಿಲ್ಲೆಗಳು ಈಗಾಗಲೇ ಆಲಿಕಲ್ಲು ಮಳೆಯಿಂದ ತತ್ತರಿಸಿದೆ. ಧಾರವಾಡ, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಭಾರಿ ಪ್ರಮಾಣದಲ್ಲಿ ಆಲಿಕಲ್ಲು ಮಳೆ ಸುರಿದಿದ್ದು, ರಸ್ತೆಗಳು, ಜಮೀನುಗಳು ಆಲಿಕಲ್ಲಿನಿಂದ ತುಂಬಿ ಹೋಗಿದೆ. ಇದೀಗ ಇಂದು ಮತ್ತೆ ನಾಳೆ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗುವ ಸಂಭವ ಹೆಚ್ಚಿದ ಎಂದಿದೆ. ದಾವಣಗೆರೆ, ಯಾದಗಿರಿ, ಬೀದರ್, ಕಲಬುರಗಿ, ಬಳ್ಳಾರಿ, ವಿಜಯಪುರ, ರಾಯಚೂರು, ಶಿವಮೊಗ್ಗ, ವಿಜಯನಗರ ಸೇರಿದಂತೆ 9 ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ 9 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ.

ಮೈಸೂರು, ರಾಮನಗರ, ಕೊಡಗು, ಚಿಕ್ಕಮಗಳೂರು, ಕೋಲಾರ ಜಿಲ್ಲೆಗಳಲ್ಲಿ ಉತ್ತಮ ಮಲೆಯಾಗಲಿದೆ ಎಂದು ಸೂಚನೆ ನೀಡಲಾಗಿದ್ದರೆ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Leave a Comment

Your email address will not be published. Required fields are marked *