ಕರಾವಳಿ ಜಿಲ್ಲೆಗಳಲ್ಲಿ ಇಂದು‌ ಈದುಲ್ ಫಿತರ್ ಹಿನ್ನೆಲೆ ಸಾರ್ವತ್ರಿಕ ರಜೆ ಘೋಷಣೆ

ಸಮಗ್ರ ನ್ಯೂಸ್: ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್ ವಿ ದರ್ಶನ್ ಆದೇಶಿಸಿದ್ದಾರೆ.ಉಡುಪಿ ಜಿಲ್ಲೆಯಲ್ಲೂ ಶುಕ್ರವಾರ ರಂಜಾನ್ ಹಬ್ಬದ ಆಚರಣೆ ಹಿನ್ನಲೆ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ.

. Ad Widget . Ad Widget . Ad Widget

ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಇಂದು ಮುಸ್ಸಂಜೆ ಆಗಿರುವುದರಿಂದ ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ರ್‌ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ ಎಂದು ಮಸ್ಜಿದ್ ಝೀನತ್ ಭಕ್ಷ್ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

. Ad Widget .

Leave a Comment

Your email address will not be published. Required fields are marked *