ಮಂಗಳೂರು- ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ 35 ದಿನ ಸಂಚಾರ ಬಂದ್

ಸಮಗ್ರ ನ್ಯೂಸ್: ದಕ್ಷಿಣ ಪಶ್ಚಿಮ ರೈಲ್ವೆ ವ್ಯಾಪ್ತಿಯಲ್ಲಿ ನಡೆಯಲಿರುವ ತುರ್ತು ಹಳಿ ಕಾಮಗಾರಿಗಳ ಕಾರಣದಿಂದಾಗಿ ಮಂಗಳೂರು ಮತ್ತು ಸುಬ್ರಹ್ಮಣ್ಯ ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲುಗಳ ಸೇವೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡಲಾಗಿದೆ.

Ad Widget ... ..

ಮಂಗಳೂರು ಸೆಂಟ್ರಲ್ ಮತ್ತು ಸುಬ್ರಹ್ಮಣ್ಯ ರೋಡ್ ನಡುವೆ ಸಂಚರಿಸುವ ಪ್ಯಾಸೆಂಜರ್ ರೈಲುಗಳನ್ನು ಒಟ್ಟು 35 ದಿನಗಳ ಕಾಲ ಪೂರ್ಣವಾಗಿ ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 56629 (ಮಂಗಳೂರು – ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್) ಹಾಗೂ ರೈಲು ಸಂಖ್ಯೆ 56630 (ಸುಬ್ರಹ್ಮಣ್ಯ ರೋಡ್ – ಮಂಗಳೂರು ಪ್ಯಾಸೆಂಜರ್) ರದ್ದಾಗಿದೆ. ಈ ರೈಲುಗಳನ್ನು ರೈಲುಗಳನ್ನು ಮಾರ್ಚ್ 23ರಿಂದ ಏಪ್ರಿಲ್ 14ರವರೆಗೆ ಹಾಗೂ ಜೂನ್ 10ರಿಂದ ಜೂನ್ 21ರವರೆಗೆ ಒಟ್ಟು 35 ದಿನಗಳ ಕಾಲ ರದ್ದುಪಡಿಸಲಾಗಿದೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.

Ad Widget

ಕೆಲವು ಎಕ್ಸ್‌ಪ್ರೆಸ್ ರೈಲುಗಳ ಸಂಚಾರದ ವೇಳಾಪಟ್ಟಿಯಲ್ಲಿಯೂ ಏಪ್ರಿಲ್ ತಿಂಗಳಿನಲ್ಲಿ ಬದಲಾವಣೆ ಇರಲಿದೆ:
ಯಶವಂತಪುರ – ಕಾರವಾರ (16515), ಯಶವಂತಪುರ – ಮಂಗಳೂರು (16575) ಮತ್ತು ಯಶವಂತಪುರ – ಮಂಗಳೂರು (16539) ಎಕ್ಸ್‌ಪ್ರೆಸ್ ರೈಲುಗಳು ಸುಮಾರು 20 ನಿಮಿಷಗಳ ಕಾಲ ತಡವಾಗಿ ಸಂಚರಿಸಲಿವೆ. ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು (56229) ಏಪ್ರಿಲ್ 21 ರಿಂದ ಜೂನ್ 9 ರವರೆಗೆ ಸುಮಾರು 55 ನಿಮಿಷ ವಿಳಂಬವಾಗಲಿದೆ.

ಯುಗಾದಿ, ರಂಜಾನ್‌ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈಋುತ್ಯ ರೈಲ್ವೆಯು ಯಶವಂತಪುರ-ಮಡಗಾಂವ್‌- ಬೆಂಗಳೂರು ಕಂಟೋನ್ಮೆಂಟ್‌ ನಡುವೆ ಒಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳನ್ನು ಓಡಿಸುತ್ತಿದೆ. ಯಶವಂತಪುರ ಮಡಗಾಂವ್‌ ವಿಶೇಷ ಎಕ್ಸ್‌ಪ್ರೆಸ್‌ ರೈಲು ಮಾರ್ಚ್ 20ರಂದು ಬೆಳಗ್ಗೆ 11.50 ಕ್ಕೆ ಯಶವಂತಪುರದಿಂದ ಹೊರಟು ಶನಿವಾರ ಬೆಳಗ್ಗೆ 6.45 ಕ್ಕೆ ಮಡಗಾಂವ್‌ ತಲುಪಲಿದೆ.

ವಾಪಸ್ಸಾಗುವ ರೈಲು ಮಾರ್ಚ್ 22ರಂದು ಬೆಳಗ್ಗೆ 11ಕ್ಕೆ ಮಡಗಾಂವ್‌ನಿಂದ ಹೊರಟು ಸೋಮವಾರ ಬೆಳಗ್ಗೆ 5.20ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ ತಲುಪಲಿದೆ.ಕುಣಿಗಲ್‌, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್‌, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್‌, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್‌, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿಈ ರೈಲು ನಿಲ್ಲಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Comment

Your email address will not be published. Required fields are marked *