ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮಗದೊಂದು ದಾಖಲೆ ಬರೆದಿದ್ದು, ದೇಶದಲ್ಲಿ ದೀರ್ಘಾವಧಿಯ ಆಡಳಿತ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ ವ್ಯಕ್ತಿ ಎನಿಸಿದ್ದಾರೆ.

Ad Widget ... ..

8,931 ದಿನ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ದೀರ್ಘಾವಧಿಗೆ ಸರ್ಕಾರದ ಮುಖ್ಯಸ್ಥರಾಗಿದ್ದ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್‌ ಕುಮಾರ್‌ ಚಮ್ಲಿಂಗ್‌ ಅವರ ದಾಖಲೆಯನ್ನು ಪ್ರಧಾನಿ ಮೋದಿ ಮುರಿದಿದ್ದಾರೆ.

Ad Widget

2001 ಅಕ್ಟೋಬರ್ 1ರಂದು ಗುಜರಾತ್‌ ಮುಖ್ಯಮಂತ್ರಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದರು. 2014 ಮೇ 26ರವರೆಗೆ ಅವರು ಗುಜರಾತ್‌ನ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು.

ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲುವಿನತ್ತ ಮುನ್ನಡೆಸಿದ್ದರಲ್ಲದೆ ಭಾರತದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.

ಸಾರ್ವಜನಿಕ ಜೀವನದಲ್ಲಿ 8,931 ದಿನಗಳನ್ನು ಪೂರೈಸಿರುವ ಪ್ರಧಾನಿ ಮೋದಿ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ ಸಿಂಗ್ ಅಭಿನಂದಿಸಿದ್ದಾರೆ.

24 ವರ್ಷಗಿಂತಲೂ ಹೆಚ್ಚು ಸಮಯ ಯಾವುದೇ ರಜೆ ತೆಗೆದುಕೊಳ್ಳದೇ ಜನ ಸೇವೆ ಮಾಡುತ್ತಿರುವುದು ಮೋದಿ ಅವರ ಬದ್ದತೆಯ ಪ್ರತೀಕವಾಗಿದೆ ಎಂದು ಅಮಿತ್ ಶಾ ಹೊಗಳಿದ್ದಾರೆ.

Leave a Comment

Your email address will not be published. Required fields are marked *