ಸಮಗ್ರ ನ್ಯೂಸ್: ಕಳೆದ ಕೆಲ ದಿನಗಳ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿಯ ಯುವ ಉದ್ಯಮಿ ಬಿ. ಸುದೀಪ್ ರೈ (36), ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೂಲತಃ ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿಯಾದ ಸುದೀಪ್ ರೈ, ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಕರ್ನೋಡಿಯಲ್ಲಿರುವ ತಮ್ಮ ಅಜ್ಜನ ಮನೆಯಲ್ಲಿ ವಾಸ್ತವ್ಯವಿದ್ದರು.
ಇವರು ಬೆಳ್ತಂಗಡಿಯಲ್ಲಿ ‘ಎಸ್‌ಆರ್‌ಎನ್ ಗ್ರೂಪ್’ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ನಡೆಸುತ್ತಿದ್ದರು. ಮಾರ್ಚ್ 17 ರಂದು ಸುದೀಪ್ ಅವರು ತಿಂಡಿಯ ಜೊತೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತಾದರೂ, ಇಂದು ಮೃತಪಟ್ಟಿದ್ದಾರೆ.ಮೃತರ ತಂದೆ ದಾಮೋದರ ರೈ ಅವರು ನೀಡಿದ ದೂರಿನ ಮೇರೆಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉದ್ಯಮದಲ್ಲಿನ ಸಮಸ್ಯೆಗಳೇ ಅಥವಾ ವೈಯಕ್ತಿಕ ಕಾರಣಗಳಿಂದಾಗಿ ಈ ಘಟನೆ ಸಂಭವಿಸಿದೆಯೇ ಎಂಬ ನಿಟ್ಟಿನಲ್ಲಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.







