ವೈಭವ್ ಸೂರ್ಯವಂಶಿ ಅಬ್ಬರಕ್ಕೆ ತತ್ತರಿಸಿದ ಸಿಎಸ್ ಕೆ| ರಾಜಾಸ್ತಾನ್ ರಾಯಲ್ಸ್ ಗೆ ಭರ್ಜರಿ ಜಯ

ಸಮಗ್ರ ನ್ಯೂಸ್: ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ ಮೂರನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ್ ರಾಯಲ್ಸ್ ವಿರುದ್ಧ 8 ವಿಕೆಟ್‌ಗಳ ಗೆಲುವನ್ನು ದಾಖಲಿಸಿದೆ.

. Ad Widget . Ad Widget . Ad Widget .

ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆರಿಸಿಕೊಂಡ ಕಾರಣ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 19.4 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲ್‌ಔಟ್ ಆಗಿ ರಾಜಸ್ಥಾನ್ ರಾಯಲ್ಸ್‌ಗೆ 128 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ 12.1 ಓವರ್‌ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ 128 ರನ್ ಕಲೆಹಾಕಿತು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಹಾಗೂ ರುತುರಾಜ್ ಗಾಯಕ್ವಾಡ್ ಬೇಗನೆ ಪೆವಿಲಿಯನ್ ಸೇರಿಕೊಂಡರು. ಸಂಜು ಸ್ಯಾಮ್ಸನ್ 6 ರನ್ ಗಳಿಸಿದರೆ ನಾಯಕ ಗಾಯಕ್ವಾಡ್ ಸಹ 6 ರನ್ ಕಲೆಹಾಕಿದರು. ಬೆನ್ನಲ್ಲೇ ಆಯುಷ್ ಮ್ಹಾತ್ರೆ ಡಕ್‌ಔಟ್ ಆದರೆ, ಮ್ಯಾಥ್ಯೂ ಶಾರ್ಟ್ ಕೇವಲ 2 ರನ್ ಕಲೆಹಾಕಿದರು. ಹೀಗೆ ಕೇವಲ 38 ರನ್‌ಗಳಿಗೆ ತನ್ನ ಮೊದಲ ನಾಲ್ಕು ವಿಕೆಟ್ ಕಳೆದುಕೊಂಡ ಚೆನ್ನೈ ತೀವ್ರ ಸಂಕಷ್ಟಕ್ಕೆ ಸಿಲುಕಿತು. ನಂತರ ಕಣಕ್ಕಿಳಿದ ಸರ್ಫರಾಜ್ ಖಾನ್ 17, ಕಾರ್ತಿಕ್ ಶರ್ಮಾ 18, ಶಿವಮ್ ದುಬೆ 6, ನೂರ್ ಅಹ್ಮದ್ 1, ಮ್ಯಾಟ್ ಹೆನ್ರಿ 5, ಅನ್ಶುಲ್ ಕಂಬೋಬ್ ಅಜೇಯ 7 ರನ್ ಹಾಗೂ ಏಕಾಂಗಿ ಹೋರಾಟ ನಡೆಸಿ ಉತ್ತಮ ಇನ್ನಿಂಗ್ಸ್ ಆಡಿದ ಜೇಮಿ ಓವರ್ಟನ್ 36 ಎಸೆತಗಳಲ್ಲಿ 43 ರನ್ ಕಲೆಹಾಕಿ ತಂಡ ನೂರರ ಗಡಿ ದಾಟುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು.

ರಾಜಸ್ಥಾನ್ ರಾಯಲ್ಸ್ ಪರ ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ, ಬ್ರಿಜೇಶ್ ಶರ್ಮಾ, ಸಂದೀಪ್ ಶರ್ಮಾ ಹಾಗೂ ರವಿ ಬಿಷ್ಣೋಯಿ ತಲಾ ಒಂದೊಂದು ವಿಕೆಟ್ ಪಡೆದರು.

ರಾಜಸ್ಥಾನ್ ರಾಯಲ್ಸ್ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 17 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 52 ರನ್ ಚಚ್ಚಿ ಅಬ್ಬರಿಸಿದರೆ, ಧ್ರುವ್ ಜುರೆಲ್ 18, ನಾಯಕ ರಿಯಾನ್ ಪರಾಗ್ ಅಜೇಯ 14 ಹಾಗೂ ಯಶಸ್ವಿ ಜೈಸ್ವಾಲ್ ಅಜೇಯ 38 ರನ್ ಗಳಿಸಿದರು. ಚೆನ್ನೈ ಸೂಪರ್ ಕಿಂಗ್ಸ್ ಪರ ಅನ್ಶುಲ್ ಕಾಂಬೋಜ್ ಎರಡು ವಿಕೆಟ್ ಪಡೆದರು.

Leave a Comment

Your email address will not be published. Required fields are marked *