March 2026

ಆರ್ ಸಿಬಿ‌ ಜೊತೆಪ್ರಾಯೋಜಕತ್ವ ಪಡೆದ ನಂದಿನಿ

ಸಮಗ್ರ ನ್ಯೂಸ್: ಕರ್ನಾಟಕ ಹಾಲು ಮಹಾಮಂಡಳಿಯು ನಂದಿನಿ ಉತ್ಪನ್ನಗಳ ಪ್ರಚಾರದ ಭಾಗವಾಗಿ ಐಪಿಎಲ್‌-2026 ಲೀಗ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು( ಆರ್‌ಸಿಬಿ) ತಂಡಕ್ಕೆ ಪ್ರಾಯೋಜಕತ್ವ ನೀಡಿದೆ. ಎರಡು ವರ್ಷದ ಹಿಂದೆ ಸ್ಕಾಟ್ಲೆಂಡ್‌ ಹಾಗೂ ಐರ್ಲೆಂಡ್‌ ತಂಡಗಳಿಗೆ ಕೆಎಂಎಫ್‌ ಪ್ರಾಯೋಜಕತ್ವ ನೀಡಿತ್ತು. ಈ ಬಾರಿ ಆರ್‌ಸಿಬಿ ತಂಡದ ಅಧಿಕೃತ ಡೈರಿ ಪಾಲುದಾರ ಆಗಿ ಕಾರ್ಯನಿರ್ವಹಿಸಲಿದ್ದು, ಇದಕ್ಕಾಗಿ ₹4.80 ಕೋಟಿ ವಿನಿಯೋಗ ಮಾಡಲಿದೆ. ‘ನಂದಿನಿ ಬ್ರಾಂಡ್‌ ಕ್ರೀಡೆ ಮತ್ತು ಯುವಜನತೆಯನ್ನು ಪ್ರೋತ್ಸಾಹಿಸುವ ಧ್ಯೇಯ ಹೊಂದಿದೆ. ಕರ್ನಾಟಕದ ಹೆಮ್ಮೆಯ ಎರಡು ಪ್ರತಿಷ್ಠಿತ ಬ್ರ‍್ಯಾಂಡ್‌ಗಳಾದ […]

ಆರ್ ಸಿಬಿ‌ ಜೊತೆಪ್ರಾಯೋಜಕತ್ವ ಪಡೆದ ನಂದಿನಿ Read More »

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ – ಹರೀಶ್ ಪೂಂಜಾ

ಸಮಗ್ರ ನ್ಯೂಸ್: ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಆದ್ಯತೆ ನೀಡುವ ಮೂಲಕ ಯುವಕರಿಗೆ ಉದ್ಯೋಗ ಸೃಷ್ಟಿಗೆ ಕ್ರಮ ವಹಿಸಬೇಕು ಎಂದು ಬಿಜೆಪಿ ಸದಸ್ಯ ಹರೀಶ್ ಪೂಂಜ ಆಗ್ರಹಿಸಿದರು. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುದಾನ ನೀಡುತ್ತಿಲ್ಲ. ಇವತ್ತು ಗೋವಾ ರಾಜ್ಯಕ್ಕೆ ದೇಶ, ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ನಮ್ಮ ಕರಾವಳಿಯ ಮೂರು ಜಿಲ್ಲೆಗಳಲ್ಲಿ 25ಕ್ಕೂ ಹೆಚ್ಚು ಜಲಪಾತಗಳಿವೆ ಅವುಗಳ ಅಭಿವೃದ್ಧಿಗೆ ಪ್ರವಾಸೋದ್ಯಮ

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ – ಹರೀಶ್ ಪೂಂಜಾ Read More »

110 ಸೈನಿಕರನ್ನು ಕೊತ್ತೊಯ್ಯುತ್ತಿದ್ದ ಕೊಲಂಬಿಯಾದ ಮಿಲಿಟರಿ ವಿಮಾನ ಪತನ

ಸಮಗ್ರ ನ್ಯೂಸ್: ಸುಮಾರು 110 ಜನರನ್ನು ಹೊತ್ತೊಯ್ಯುತ್ತಿದ್ದ ಕೊಲಂಬಿಯಾದ ಮಿಲಿಟರಿ ವಿಮಾನ ಸೋಮವಾರ (ಮಾರ್ಚ್‌ 23) ಪತನವಾಗಿದೆ ಕೊಲಂಬಿಯಾದ ಪೋರ್ಟೊ ಲೆಗುಯಿಜಾಮೊದ ದಕ್ಷಿಣ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ ಎಂದು ಮೂಲಗಳು ತಿಳಿಸಿವೆ. ಘಟನೆಯಲ್ಲಿ ಕನಿಷ್ಠ 80 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. 20 ಮಂದಿ ಗಾಯಗೊಂಡಿದ್ದಾರೆ. ʼʼಲಾಕ್‌ಹೀಡ್ ಮಾರ್ಟಿನ್ ಹರ್ಕ್ಯುಲಸ್ ಸಿ -130 ವಿಮಾನವು ಕೊಲಂಬಿಯಾದ ದಕ್ಷಿಣ ಅಮೆಜಾನ್ ಪ್ರದೇಶದ ಪೆರುವಿನ ಗಡಿಯ ಸಮೀಪದಲ್ಲಿರುವ ಪೋರ್ಟೊ ಲೆಗುಯಿಜಾಮೊದಿಂದ ಸಶಸ್ತ್ರ ಪಡೆಗಳ ಸೈನಿಕರನ್ನು ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆʼʼ ಎಂದು

110 ಸೈನಿಕರನ್ನು ಕೊತ್ತೊಯ್ಯುತ್ತಿದ್ದ ಕೊಲಂಬಿಯಾದ ಮಿಲಿಟರಿ ವಿಮಾನ ಪತನ Read More »

ಸೌಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ನೋಟೀಸ್

ಸಮಗ್ರ ನ್ಯೂಸ್: 13 ವರ್ಷದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಸುಪ್ರೀಂ ಕೋರ್ಟ್ ಸೋಮವಾರ(ಮಾ.23), ಕೇಂದ್ರ ತನಿಖಾ ದಳ (ಸಿಬಿಐ) ಮತ್ತು ಕರ್ನಾಟಕ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮೃತ ವಿದ್ಯಾರ್ಥಿನಿಯ ತಾಯಿ ಕುಸುಮಾವತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.ಉಜಿರೆಯ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿನಿ ಮತ್ತು ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿಯಾಗಿದ್ದ ಸೌಜನ್ಯ 2012 ರ ಅಕ್ಟೋಬರ್‌ನಲ್ಲಿ ನಾಪತ್ತೆಯಾಗಿದ್ದರು. ಮರುದಿನ ಮಣ್ಣಸಂಕದಲ್ಲಿ ಆಕೆಯ ಶವ

ಸೌಜನ್ಯ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐಗೆ ಸುಪ್ರೀಂ ನೋಟೀಸ್ Read More »

ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್ ‌ಟಿಕೆಟ್ ಘೋಷಣೆ

ಸಮಗ್ರ ನ್ಯೂಸ್: ಎಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಪ್ರಕಟಿಸಲಾಗಿದೆ. ನಿನ್ನೆಯೇ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿ ಬಿ ಫಾರಂ ನೀಡಲಾಗಿದ್ದು, ಇಂದು ಎಐಸಿಸಿಯಿಂದ ಅಧಿಕೃತವಾಗಿ

ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ಕಾಂಗ್ರೆಸ್ ‌ಟಿಕೆಟ್ ಘೋಷಣೆ Read More »

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಮಗದೊಂದು ದಾಖಲೆ ಬರೆದಿದ್ದು, ದೇಶದಲ್ಲಿ ದೀರ್ಘಾವಧಿಯ ಆಡಳಿತ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ ವ್ಯಕ್ತಿ ಎನಿಸಿದ್ದಾರೆ. 8,931 ದಿನ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ದೀರ್ಘಾವಧಿಗೆ ಸರ್ಕಾರದ ಮುಖ್ಯಸ್ಥರಾಗಿದ್ದ ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್‌ ಕುಮಾರ್‌ ಚಮ್ಲಿಂಗ್‌ ಅವರ ದಾಖಲೆಯನ್ನು ಪ್ರಧಾನಿ ಮೋದಿ ಮುರಿದಿದ್ದಾರೆ. 2001 ಅಕ್ಟೋಬರ್ 1ರಂದು ಗುಜರಾತ್‌ ಮುಖ್ಯಮಂತ್ರಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದರು. 2014 ಮೇ 26ರವರೆಗೆ ಅವರು ಗುಜರಾತ್‌ನ ಮುಖ್ಯಮಂತ್ರಿ ಹುದ್ದೆಯಲ್ಲಿದ್ದರು. ಬಳಿಕ ನಡೆದ ಲೋಕಸಭೆ ಚುನಾವಣೆಯಲ್ಲಿ

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ Read More »

ಡಿಜಿಪಿ‌ ರಾಮಚಂದ್ರ ರಾವ್ ಪ್ರಣಯ ಪ್ರಸಂಗ ಅಸಲಿ| ತನಿಖೆಯಲ್ಲಿ ಬಯಲಾಯ್ತು ಸತ್ಯ

ಸಮಗ್ರ ನ್ಯೂಸ್: ಕಚೇರಿಯಲ್ಲಿ ಪೊಲೀಸ್‌ ಸಮವಸ್ತ್ರದಲ್ಲೇ ಮಹಿಳೆಯರ ಜತೆ ಅನುಚಿತವಾಗಿ ವರ್ತಿಸಿ ಅಮಾನತುಗೊಂಡಿರುವ ಡಿಜಿಪಿ ಕೆ.ರಾಮಚಂದ್ರರಾವ್‌ ಅವರ ಪ್ರಣಯ ವಿಡಿಯೋಗಳು ನೈಜವೆಂದು ತನಿಖಾ ತಂಡವು ರಾಜ್ಯ ಸರಕಾರಕ್ಕೆ 100 ಪುಟಗಳ ವರದಿ ಸಲ್ಲಿಸಿದೆ. ರಾಮಚಂದ್ರರಾವ್‌ ಅಸಭ್ಯವಾಗಿ ವರ್ತಿಸಿರುವ ವಿಡಿಯೋಗಳು ಕೆಲ ತಿಂಗಳ ಹಿಂದೆ ಜಾಲತಾಣದಲ್ಲಿ ಬಹಿರಂಗವಾಗಿ ಭಾರೀ ಸಂಚಲನ ಸೃಷ್ಟಿಸಿ ಸರಕಾರಕ್ಕೆ ಹಾಗೂ ಪೊಲೀಸ್‌ ಇಲಾಖೆಗೆ ತೀವ್ರ ಮುಜುಗರವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸರಕಾರ, ಉನ್ನತ ತನಿಖೆಗೆ ಆದೇಶಿಸಿತ್ತು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ

ಡಿಜಿಪಿ‌ ರಾಮಚಂದ್ರ ರಾವ್ ಪ್ರಣಯ ಪ್ರಸಂಗ ಅಸಲಿ| ತನಿಖೆಯಲ್ಲಿ ಬಯಲಾಯ್ತು ಸತ್ಯ Read More »

ಕೈಗಾರಿಕಾ ಡೀಸೆಲ್‌ ಬೆಲೆಯಲ್ಲಿ ₹ 22 ಹೆಚ್ಚಳ

ಸಮಗ್ರ ನ್ಯೂಸ್: ಇರಾನ್-ಇಸ್ರೇಲ್ ಯುದ್ಧವು ಸಾಮಾನ್ಯ ಜನರಿಂದ ಹಿಡಿದು ಕೈಗಾರಿಕೆಗಳವರೆಗೆ ಎಲ್ಲರ ಮೇಲೆ ಪರಿಣಾಮ ಬೀರುತ್ತಿದೆ. ಇಂಧನ ಆಮದಿನ ಮೇಲೆ ಭಾರತ ಹೆಚ್ಚಿನ ಅವಲಂಬನೆ ಹೊಂದಿರುವುದು ಇದಕ್ಕೆ ಪ್ರಮುಖ ಕಾರಣ. ಪ್ರಸ್ತುತ, ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಬ್ರೆಂಟ್ ಕಚ್ಚಾ ತೈಲದ ಬ್ಯಾರೆಲ್‌ಗೆ $115 ದಾಟಿದೆ. ಕೆಲವು ದಿನಗಳ ಹಿಂದೆ ಒಂದು ಲೀಟರ್ ಗ್ಯಾಸ್ ಬೆಲೆಯನ್ನು ಹೆಚ್ಚಿಸಿದ್ದ ತೈಲ ಕಂಪನಿಗಳು ಶುಕ್ರವಾರ ವಿದ್ಯುತ್ ಪೆಟ್ರೋಲ್ ಬೆಲೆಯನ್ನು ರೂ.2 ಕ್ಕಿಂತ ಹೆಚ್ಚು ಹೆಚ್ಚಿಸಿವೆ. ಅದಾದ ಸ್ವಲ್ಪ ಸಮಯದ ನಂತರ,

ಕೈಗಾರಿಕಾ ಡೀಸೆಲ್‌ ಬೆಲೆಯಲ್ಲಿ ₹ 22 ಹೆಚ್ಚಳ Read More »

ಪ್ರೀಮಿಯಂ ಪೆಟ್ರೋಲ್ ದರದಲ್ಲಿ ₹2.35ರಷ್ಟು ಏರಿಕೆ| ನೂತನ ದರ ಇಂದಿನಿಂದಲೇ ಜಾರಿ

ಸಮಗ್ರ ನ್ಯೂಸ್: ಇಸ್ರೇಲ್ ಇರಾನ್‌ ನಡುವಿನ ಯುದ್ಧದ ಪರಿಣಾಮ ತೈಲ ಮಾರುಕಟ್ಟೆಗೆ ತಟ್ಟಿದ್ದು, ದೇಶಾದ್ಯಂತ ಪ್ರೀಮಿಯಂ ದರ್ಜೆಯ ಪವರ್ ಪೆಟ್ರೋಲ್ ಬೆಲೆ ಏರಿಕೆ ಮಾಡಲಾಗಿದೆ. ಈ ಬಗ್ಗೆ ಶುಕ್ರವಾರ ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಮಹತ್ವದ ನಿರ್ಧಾರ ಕೈಗೊಂಡಿವೆ ಪ್ರೀಮಿಯಂ ದರ್ಜೆಯ ಪವರ್‌ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 2.09 ರಿಂದ 2.35 ರೂ.ಗಳವರೆಗೆ ಹೆಚ್ಚಾಗುತ್ತಿವೆ. ಆದರೆ, ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾವಣೆಯಾಗಿಲ್ಲ. ಪರಿಷ್ಕೃತ ದರಗಳು ಬಿಪಿಸಿಎಲ್‌ನ ಸ್ಪೀಡ್, ಎಚ್‌ಪಿಸಿಎಲ್‌ನ ಪವರ್ ಮತ್ತು

ಪ್ರೀಮಿಯಂ ಪೆಟ್ರೋಲ್ ದರದಲ್ಲಿ ₹2.35ರಷ್ಟು ಏರಿಕೆ| ನೂತನ ದರ ಇಂದಿನಿಂದಲೇ ಜಾರಿ Read More »

ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್| ಬೆಳ್ತಂಗಡಿಯಲ್ಲಿ ಯುವತಿಯನ್ನು ಬಂಧಿಸಿದ ಮಂಗಳೂರು ಪೊಲೀಸರು

ಸಮಗ್ರ ನ್ಯೂಸ್: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನೆಗೆ ಕಾರಣವಾಗುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ 2023ರ ಫೆಬ್ರವರಿ 2ರಂದು ಭಾರತೀಯ ದಂಡ ಸಂಹಿತೆಯ ವಿವಿಧ ವಿಧಿಗಳಡಿ ಪ್ರಕರಣ ದಾಖಲಾಗಿದ್ದು, ತನಿಖೆ ಸಂದರ್ಭದಲ್ಲಿ ಯುವತಿ ಪ್ರಚೋದನಾತ್ಮಕ ವಿಷಯಗಳನ್ನು ಹಂಚಿಕೊಂಡಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮಾರ್ಚ್ 19ರಂದು ಆಕೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು

ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್| ಬೆಳ್ತಂಗಡಿಯಲ್ಲಿ ಯುವತಿಯನ್ನು ಬಂಧಿಸಿದ ಮಂಗಳೂರು ಪೊಲೀಸರು Read More »