ಕಡಬ: ಅಕ್ರಮ ಗೋಸಾಗಾಟ; ಆರೋಪಿಯ ಬಂಧನ

ಸಮಗ್ರ ನ್ಯೂಸ್: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಠಾಣಾ ಪೊಲೀಸರು ಪತ್ತೆಹಚ್ಚಿ 19 ಜಾನುವಾರುಗಳನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

. Ad Widget . Ad Widget . Ad Widget .

ಶುಕ್ರವಾರ ಬೆಳಗಿನ ಜಾವ ಹಾಸನ ಕಡೆಯಿಂದ ಕಂಟೇನರ್ ವಾಹನದಲ್ಲಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ಕೈಗೊಂಡರು.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಕಡಬ ಸಮೀಪದ ಕನ್ವರೆ ಪ್ರದೇಶದಲ್ಲಿ ವಾಹನವನ್ನು ತಡೆದು ಪರಿಶೀಲಿಸಿದಾಗ ಜಾನುವಾರುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿರುವುದು ಕಂಡು ಬಂದಿದೆ.

ಹೊಸೂರು ಮೂಲದ ಅಕ್ರಮ್ ಪಾಷಾ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಇನ್ನೋರ್ವ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *