ಎ.9 ರಂದು ಪಿಯುಸಿ ಫಲಿತಾಂಶ ಪ್ರಕಟ| ರಿಸಲ್ಟ್ ಹೀಗೆ ನೋಡಿ…

ಸಮಗ್ರ ನ್ಯೂಸ್: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್ 9, 2026 ರಂದು ಫಲಿತಾಂಶ ಹೊರಬೀಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.

Ad Widget ... ..

ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆದಿದ್ದ ಈ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ರಾಜ್ಯಾದ್ಯಂತ 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಏಪ್ರಿಲ್ 9 ರಂದು ಬೆಳಿಗ್ಗೆಯಿಂದಲೇ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

Ad Widget

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಈ ಮೊದಲು ಏಪ್ರಿಲ್7, 2026 ರಂದು ಫಲಿತಾಂಶ ಪ್ರಕಟಿಸುವ ಬಗ್ಗೆ ಸೂಚನೆ ನೀಡಿತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ ಕೆಲವು ತಾಂತ್ರಿಕ ಕಾರಣಗಳು ಅಥವಾ ಚುನಾವಣಾ ನೀತಿ ಸಂಹಿತೆಯ ಕ್ಲಿಯರೆನ್ಸ್ ಬಾಕಿ ಇರುವುದರಿಂದ ಇಂದು(ಏಪ್ರಿಲ್7) ಫಲಿತಾಂಶ ಪ್ರಕಟವಾಗುತ್ತಿಲ್ಲ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್ 9, 2026 ರಂದು ಫಲಿತಾಂಶ ಹೊರಬೀಳಲಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ.

ಅಧಿಕೃತ ಸಮಯ: ಫಲಿತಾಂಶ ಪ್ರಕಟವಾಗುವ ದಿನ ಬೆಳಿಗ್ಗೆ 11:00 ಗಂಟೆಗೆ ಲಿಂಕ್ ಲಭ್ಯವಾಗಲಿದೆ.

ವೆಬ್‌ಸೈಟ್: ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ನೋಡಬಹುದು:

karresults.nic.in
kseab.karnataka.gov.in
ಫಲಿತಾಂಶನೋಡುವುದುಹೇಗೆ?

ಮೇಲೆ ತಿಳಿಸಿದ ಯಾವುದಾದರೂ ಒಂದು ವೆಬ್‌ಸೈಟ್‌ಗೆ ಭೇಟಿ ನೀಡಿ.
‘2nd PUC Exam-1 Result 2026’ ಎಂಬ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ನೋಂದಣಿಸಂಖ್ಯೆ (Registration Number) ನಮೂದಿಸಿ.
ನಿಮ್ಮ ವಿಷಯದ ಸ್ಟ್ರೀಮ್ (Arts/Commerce/Science) ಆಯ್ಕೆ ಮಾಡಿ.
Submit ಬಟನ್ ಒತ್ತಿದರೆ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

Leave a Comment

Your email address will not be published. Required fields are marked *