ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಳೆಂದು ಸಾವಿಗೆ ಶರಣಾದ ಪ್ರಿಯಕರ| ಮನೆಯವರ ವಿರೋಧಕ್ಕೆ ಮಸಣ ಪಾಲಾದ ಪ್ರೀತಿ!!

ಸಮಗ್ರ ನ್ಯೂಸ್: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಪಟ್ಟಣದಲ್ಲಿ ನಡೆದಿದೆ.

Ad Widget ... ..

ಮದುವೆ ವಿಚಾರವಾಗಿ ಮನೆಯವರ ವಿರೋಧ ಎದುರಿಸಿದ ಹಿನ್ನೆಲೆಯಲ್ಲಿ, ಇಬ್ಬರು ಪ್ರೇಮಿಗಳು ಚರ್ಚೆ ನಡೆಸುವ ವೇಳೆ ಗಲಾಟೆ ಉಂಟಾಗಿ ವೈಮನಸ್ಸು ಉಂಟಾಗಿದೆ ಎಂದು ತಿಳಿದುಬಂದಿದೆ. ಇದರಿಂದ ಮನನೊಂದ ಯುವತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Ad Widget

ಬನಹಟ್ಟಿಯ ಕೆಹೆಚ್‌ಡಿಸಿ ಕಾಲೋನಿ ನಿವಾಸಿ ಪವಿತ್ರಾ ಒಂಟಿ (19) ಹಾಗೂ ಅಸ್ಕಿ ಗ್ರಾಮದ ಕಾರ್ತಿಕ್ ನಾಯಕ್ (19) ಮೃತಪಟ್ಟ ದುರ್ದೈವಿಗಳು.

ಮಂಗಳವಾರ ಸಂಜೆ ಸಂಭವಿಸಿದ ಈ ಅವಳಿ ಸಾವುಗಳು ಇಡೀ ತಾಲೂಕನ್ನು ಕಂಗೆಡಿಸಿವೆ.ಪರಸ್ಪರ ಪ್ರೀತಿಸುತ್ತಿದ್ದ ಪವಿತ್ರಾ ಮತ್ತು ಕಾರ್ತಿಕ್ ನಡುವೆ ಮಂಗಳವಾರ ಯಾವುದೋ ವಿಷಯವಾಗಿ ಮಾತಿನ ಚಕಮಕಿ ನಡೆದಿತ್ತು ಎನ್ನಲಾಗಿದೆ. ಈ ವೈಮನಸ್ಸಿನಿಂದ ತೀವ್ರವಾಗಿ ನೊಂದ ಪವಿತ್ರಾ, ಮಂಗಳವಾರ ಸಂಜೆ ಬನಹಟ್ಟಿಯ ತನ್ನ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪವಿತ್ರಾ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿಯುತ್ತಿದ್ದಂತೆಯೇ ಕಾರ್ತಿಕ್ ಬುಧವಾರ ಮುಂಜಾನೆ ತನ್ನ ಗ್ರಾಮವಾದ ಅಸ್ಕಿಯಲ್ಲಿ ನೇಣು ಹಾಕಿಕೊಂಡು ಜೀವನ ಅಂತ್ಯಗೊಳಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ಬನಹಟ್ಟಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Leave a Comment

Your email address will not be published. Required fields are marked *