ಅಸ್ಸಾಂ, ಕೇರಳ, ಪುದುಚೇರಿಯಲ್ಲಿ ನಾಳೆ ಚುನಾವಣೆ| ಚು. ಆಯೋಗದಿಂದ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಏಪ್ರಿಲ್ 9 ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಮಂಗಳವಾರ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಅಭ್ಯರ್ಥಿಗಳು ಈಗ ಮನೆ ಮನೆ ಪ್ರಚಾರದತ್ತ ಗಮನ ಹರಿಸಿದ್ದಾರೆ.

. Ad Widget . Ad Widget . Ad Widget .

ಈ ಮೂರೂ ರಾಜ್ಯಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಅಸ್ಸಾಂನಲ್ಲಿ 18-19 ವರ್ಷ ವಯಸ್ಸಿನ ಸುಮಾರು 57.5 ಮಿಲಿಯನ್ ಯುವಕರು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವುದು ವಿಶೇಷ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಇತ್ತ ಮೂರು ರಾಜ್ಯಗಳಲ್ಲಿ ಪ್ರಚಾರ ಮುಗಿದಿದ್ದರೆ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಪ್ರಚಾರದ ಅಬ್ಬರ ಜೋರಾಗಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದರೆ, ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ಮತದಾನ‌ ನಡೆಯಲಿದೆ.

Leave a Comment

Your email address will not be published. Required fields are marked *