ಕಡಬ: ಕುಮಾರಧಾರಾ ನದಿ ತೀರದಲ್ಲಿ ಕಾಡಾನೆಗಳ ಹಿಂಡು| ಅರಣ್ಯ ಇಲಾಖೆಯಿಂದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ 102 ನೆಕ್ಕಿಲಾಡಿ ಹಾಗೂ ಕೋರಿಯರ್ ಸಮೀಪದ ಕುಮಾರಧಾರಾ ನದಿ ತೀರದಲ್ಲಿ ಶನಿವಾರ 8 ಕಾಡಾನೆಗಳ ಹಿಂಡು ಕಾಣಿಸಿಕೊಂಡಿದೆ. ನದಿ ತೀರದಲ್ಲಿ ಆನೆಗಳು ಗುಂಪಾಗಿ ಸಂಚರಿಸುತ್ತಿರುವ ದೃಶ್ಯವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget ... ..

ವಿಷಯ ತಿಳಿಯುತ್ತಿದ್ದಂತೆ ಸುಬ್ರಹ್ಮಣ್ಯ ಹಾಗೂ ಪಂಜ ವಲಯದ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆನೆಗಳು ಜನವಸತಿ ಪ್ರದೇಶಕ್ಕೆ ನುಗ್ಗದಂತೆ ತಡೆಯಲು ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಕಾಡಾನೆಗಳನ್ನು ಅರಣ್ಯದತ್ತ ಹಿಮ್ಮೆಟ್ಟಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.

Ad Widget

ಆಹಾರ ಮತ್ತು ನೀರಿನ ಹುಡುಕಾಟದಲ್ಲಿ ಆನೆಗಳು ನದಿ ತೀರಕ್ಕೆ ಬಂದಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಕಾಡಾನೆಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅನಗತ್ಯವಾಗಿ ನದಿ ತೀರಕ್ಕೆ ಅಥವಾ ಕಾಡಂಚಿನ ಪ್ರದೇಶಕ್ಕೆ ತೆರಳಬಾರದು. ಅದರಲ್ಲೂ ರಾತ್ರಿ ಸಮಯದಲ್ಲಿ ಸಂಚಾರ ನಡೆಸುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಎಂದು ಅರಣ್ಯ ಇಲಾಖೆ ಸೂಚನೆ ನೀಡಿದೆ. ಆನೆಗಳ ಹತ್ತಿರ ಹೋಗಿ ಫೋಟೋ ಅಥವಾ ವಿಡಿಯೋ ತೆಗೆಯುವ ಸಾಹಸಕ್ಕೆ ಕೈಹಾಕಬಾರದು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.

Leave a Comment

Your email address will not be published. Required fields are marked *