ಬೆಳ್ತಂಗಡಿ: ಅತಿವೇಗದಲ್ಲಿ ಬಂದು ಪಾದಾಚಾರಿಗಳ ಮೇಲೆರಗಿದ ಓಮ್ನಿ ಕಾರು; ಮಹಿಳೆ ಗಂಭೀರ

ಸಮಗ್ರ ನ್ಯೂಸ್: ಅತಿ ವೇಗವಾಗಿ ಬಂದ ಓಮ್ನಿ ಕಾರೊಂದು ನಿಯಂತ್ರಣ ತಪ್ಪಿ ಪಾದಚಾರಿಗಳ ಮೇಲೆ ಡಿಕ್ಕಿ ಹೊಡೆದ ಘಟನೆ ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಉಳಿದ ಮೂವರು ಪವಾಡಸದೃಶವಾಗಿ ಪಾರಾಗಿದ್ದಾರೆ.

. Ad Widget . Ad Widget . Ad Widget .

ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ತಿರುವಿನಲ್ಲಿ ವೇಗವಾಗಿ ಬಂದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಪಾದಚಾರಿಗಳ ಮೇಲೆ ಉರುಳಿದೆ. ಅದೃಷ್ಟವಶಾತ್ ಮಕ್ಕಳಿಬ್ಬರು ಹಾಗೂ ಮಹಿಳೆಯೊಬ್ಬರು ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಆದರೆ ಓರ್ವ ಮಹಿಳೆ ಓಮ್ನಿ ಕಾರಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳೀಯರು ಆಕೆಯನ್ನು ರಕ್ಷಿಸಿ ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಭಯಾನಕ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ

Leave a Comment

Your email address will not be published. Required fields are marked *