ಚಿಕ್ಕಮಗಳೂರಿನಲ್ಲಿ ನೀರಲ್ಲಿ ಮುಳುಗಿ‌ ವಿಟ್ಲ‌ ಮೂಲದ ಬಾಲಕ ಸಾವು

ಸಮಗ್ರ ನ್ಯೂಸ್: ಶಿಕ್ಷಕರೊಂದಿಗೆ ಈಜುಕೊಳಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರವಿವಾರ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಮೂಲದ ಅನಿಕೇತ್ (14) ಮೃತಪಟ್ಟ ದುರ್ದೈವಿ. ಜಯಪುರದ ಶ್ರೀ ಸತ್ಯಸಾಯಿ ವಿದ್ಯಾಸಂಸ್ಥೆಯಲ್ಲಿ ಅನಿಕೇತ್ ವ್ಯಾಸಂಗ ಮಾಡುತ್ತಿದ್ದ.

. Ad Widget . Ad Widget

ರವಿವಾರ ಮಧ್ಯಾಹ್ನ ಶಿಕ್ಷಕರ ತಂಡದೊಂದಿಗೆ ಈಜುಕೊಳಕ್ಕೆ ತೆರಳಿದ್ದಾಗ ಈ ಅವಘಡ ಸಂಭವಿಸಿದೆ. ಈಜಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

. Ad Widget . . Ad Widget . Ad Widget

ಮೃತ ಅನಿಕೇತ್ ವಿಟ್ಲದ ಕಾಶಿಮಠ ನಿವಾಸಿ, ಎಲ್‌ಐಸಿ ಪ್ರತಿನಿಧಿ ಗೋವರ್ಧನ್ ನಾಯಕ್ ಅವರ ಪುತ್ರ. ಮಗನ ಅಕಾಲಿಕ ಮರಣದಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಮುಗಿಸಿ ಪೋಷಕರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Comment

Your email address will not be published. Required fields are marked *