ಮಹಾರಾಷ್ಟ್ರದ ಸತಾರಾದಲ್ಲಿ ಅಪಘಾತ| ಬೆಳಗಾವಿಯ ನಾಲ್ವರು ಸಾವು

ಸಮಗ್ರ ನ್ಯೂಸ್: ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಾರಾಷ್ಟ್ರದ ಸಾತಾರಾ ಸಮೀಪ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ವರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರಲ್ಲಿ ಸಂಕೇಶ್ವರದ ಖ್ಯಾತ ವೈದ್ಯ ಡಾ. ಸಚಿನ್‌ ಶಂಕರಗೌಡ ಪಾಟೀಲ್ ಅವರು ಸೇರಿದ್ದಾರೆ ಎಂದು ತಿಳಿದುಬಂದಿದೆ.

. Ad Widget . Ad Widget

ಅಪಘಾತದ ತೀವ್ರತೆಯಿಂದ ವಾಹನ ಸಂಪೂರ್ಣವಾಗಿ ಜಖಂಗೊಂಡಿದ್ದು, ಸ್ಥಳದಲ್ಲೇ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇತರ ಮೃತರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಗಾಯಾಳುಗಳಿದ್ದಾರೆಯೇ ಎಂಬುದೂ ಸ್ಪಷ್ಟವಾಗಿಲ್ಲ.
ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *