ಇಸ್ರೇಲ್- ಲೆಬನಾನ್ ನಡುವೆ 10 ದಿನಗಳ ಕದನ ವಿರಾಮ ಘೋಷಣೆ

ಸಮಗ್ರ ನ್ಯೂಸ್: ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಮತ್ತು ಲೆಬನಾನ್ ನಡುವೆ 10 ದಿನಗಳ ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದ್ದಾರೆ.

Ad Widget ... ..

ದೀರ್ಘಕಾಲದ ಸಂಘರ್ಷಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಈ ಕುರಿತು ಮಾತನಾಡಿದ ಟ್ರಂಪ್, “ಈ ಪ್ರಕ್ರಿಯೆಯ ಭಾಗವಾಗಿರುವುದು ನನ್ನ ಪಾಲಿನ ಗೌರವವಾಗಿದೆ. ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ತರುವುದು ನಮ್ಮ ಪ್ರಮುಖ ಗುರಿ,” ಎಂದು ತಿಳಿಸಿದ್ದಾರೆ.

Ad Widget

ಟ್ರಂಪ್ ಅವರ ಈ ಮಧ್ಯಸ್ಥಿಕೆಯು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು, ಯುದ್ಧದ ಭೀತಿಯಲ್ಲಿದ್ದ ನಾಗರಿಕರಿಗೆ ಈ ಘೋಷಣೆಯು ದೊಡ್ಡ ಮಟ್ಟದ ಸಮಾಧಾನ ತಂದಿದೆ. ಇಸ್ರೇಲ್ ಮತ್ತು ಲೆಬನಾನ್ ಸರ್ಕಾರಗಳು ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿರುವುದು ಶಾಂತಿ ಸ್ಥಾಪನೆಯ ಹಾದಿಯಲ್ಲಿ ಮೊದಲ ಹೆಜ್ಜೆ ಎಂದು ವಿಶ್ಲೇಷಿಸಲಾಗುತ್ತಿದೆ.

Leave a Comment

Your email address will not be published. Required fields are marked *