ಅಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ನಾಗರಹಾವು ಕಡಿದು ಸಾವು

ಸಮಗ್ರ ನ್ಯೂಸ್: ಬೇಸಿಗೆ ರಜೆಗೆಂದು ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗುವೊಂದು ಹಾವಿನ ಕಡಿತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಸಾಗರ ಪಟ್ಟಣದ ಎಸ್‌ಎನ್ ನಗರದಲ್ಲಿ ನಡೆದಿದೆ. ಭವೀನ್ (2.5) ಮೃತಪಟ್ಟ ಬಾಲಕ. ಮೃತ ಮಗು ಭವೀನ್ ತನ್ನ ತಂದೆ-ತಾಯಿಯೊಂದಿಗೆ ರಜೆ ಕಳೆಯಲು ಅಜ್ಜಿ ಮನೆಗೆ ಬಂದಿದ್ದನು.

. Ad Widget . Ad Widget

ಮನೆಯ ಮುಂದೆ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ನಾಗರಹಾವೊಂದು ಮಗುವಿನ ಕೈಗೆ ಕಚ್ಚಿದೆ. ತಕ್ಷಣವೇ ಎಚ್ಚೆತ್ತ ಪೋಷಕರು ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ವೇಳೆಗೆ ಮಗು ಕೊನೆಯುಸಿರೆಳೆದಿದೆ.

. Ad Widget . . Ad Widget . Ad Widget

Leave a Comment

Your email address will not be published. Required fields are marked *