ರಾಜ್ಯ ಡಿಜಿಪಿ ಡಾ| ಎಂ.ಎ ಸಲೀಂ‌ ಸೇವಾವಧಿ ವಿಸ್ತರಣೆ

ಸಮಗ್ರ ನ್ಯೂಸ್: ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ಎಂ.ಎ.ಸಲೀಂ ಅವರ ಸೇವಾವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕವಾಗಿದ್ದ ಎಂ.ಎ.ಸಲೀಂ ಅವರ ಸೇವಾವಧಿಯನ್ನು 2027ರ ಆ.29ರವರೆಗೆ ವಿಸ್ತರಣೆ ಮಾಡಲಾಗಿದೆ.

. Ad Widget . Ad Widget . Ad Widget .

1993ರ ಬ್ಯಾಚ್ IPS ಅಧಿಕಾರಿಯಾಗಿರುವ ಎಂ.ಎ.ಸಲೀಂ ಅವರು ಈ ವರ್ಷದ ಜೂನ್​ನಲ್ಲಿ ನಿವೃತ್ತಿಯಾಗಬೇಕಿತ್ತು. ಆದರೆ ಸುಪ್ರೀಂಕೋರ್ಟ್​ ತೀರ್ಪಿನ ಅನುಸಾರ ಎಂ.ಎ.ಸಲೀಂ ಅವರ ಸೇವಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ಸುಪ್ರೀಂಕೋರ್ಟ್ ಆದೇಶದಂತೆ ಡಿಜಿಪಿಗೆ ಕನಿಷ್ಠ 2 ವರ್ಷಗಳ ಅಧಿಕಾರಾವಧಿ ಇರಬೇಕು. 22.09.2006ರ ಸರ್ವೋಚ್ಚ ನ್ಯಾಯಾಲಯದ ಪ್ರಕಾಶ್ ಸಿಂಗ್ vs ಯೂನಿಯನ್ ಆಫ್ ಇಂಡಿಯಾ ಪ್ರಕರಣದ ತೀರ್ಪಿನ ಅನುಸಾರ ಡಿಜಿ & ಐಜಿಪಿ ಎಂ.ಎ.ಸಲೀಂ‌ ಅವರ ಅವಧಿ ಒಟ್ಟು 2 ವರ್ಷಕ್ಕೆ ವಿಸ್ತರಣೆ ಮಾಡಲಾಗಿದೆ.

ಡಾ. ಎಂ ಎ ಸಲೀಂ ಅವರು ಈ ಹಿಂದೆ ಕಲಬುರಗಿಯಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ, ಕುಶಾಲನಗರ ಉಪ ವಿಭಾಗದಲ್ಲಿ ಸಹಾಯಕ ಪೊಲೀಸ್​ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಪೊಲೀಸ್​ ಮಹಾನಿರ್ದೇಶಕರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಡಾ. ಎಂ. ಎ ಸಲೀಂ ಅವರು ಸಿಐಡಿ ಡಿಜಿಪಿಯಾಗಿದ್ದರು. ಅಲ್ಲದೇ ಪ್ರಮುಖವಾಗಿ ಬೆಂಗಳೂರು ಸ್ಪೆಷಲ್ ಟ್ರಾಫಿಕ್ ಕಮಿಷನರ್ ಆಗಿ ಅನೇಕ ಸಂಚಾರ ಸುಧಾರಣೆ ಜಾರಿಗೆ ತಂದು ಜನಪ್ರಿಯರಾಗಿದ್ದರು.

Leave a Comment

Your email address will not be published. Required fields are marked *