ಎಸ್ಎಸ್ಎಲ್ ಸಿ ಫಲಿತಾಂಶ ಪ್ರಕಟ| ಏಳು ಮಂದಿ ವಿದ್ಯಾರ್ಥಿಗಳಿಗೆ 625 ಕ್ಕೆ 625

ಸಮಗ್ರ ನ್ಯೂಸ್: 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಬುಧವಾರ (ಏಪ್ರಿಲ್ 23) ಶಿಕ್ಷಣ ಇಲಾಖೆಯ ವೆಬ್​ಸೈಟ್​ನಲ್ಲಿ ಪ್ರಕಟವಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ಪೋರ್ಟಲ್ https://karresults.nic.in ಮೂಲಕವೂ ಫಲಿತಾಂಶ ವೀಕ್ಷಿಸಬಹುದಾಗಿದೆ. ಹಾಗೇಯೇ ‘KarnatakaOne’ ಮೊಬೈಲ್ ಆ್ಯಪ್ ಮೂಲಕವೂ ಫಲಿತಾಂಶ ಪರಿಶೀಲಿಸಿಕೊಳ್ಳಬಹುದು.

. Ad Widget . Ad Widget . Ad Widget .

ಈ ಬಾರಿಯ ಪರೀಕ್ಷೆ ಬರೆದ ಒಟ್ಟು ವಿದ್ಯಾರ್ಥಿಗಳ ಪೈಕಿ ಶೇ.94.1ರಷ್ಟು ಮಂದಿ ಪಾಸಾಗಿದ್ದಾರೆ. ಏಳು ಮಂದಿ ‌ವಿದ್ಯಾರ್ಥಿಗಳು 625 ಅಂಕಗಳನ್ನು ಪಡೆದಿದ್ದಾರೆ.

. Ad Widget . Ad Widget . Ad Widget . Ad Widget . Ad Widget . Ad Widget . . Ad Widget . Ad Widget . Ad Widget . Ad Widget .

ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗೆ ಮಂಡಳಿ ವತಿಯಿಂದಲೇ ನೇರವಾಗಿ ಫಲಿತಾಂಶದ ವಿವರಗಳು ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕ ರವಾನೆಯಾಗುತ್ತಿದೆ.

ಪರೀಕ್ಷೆ ಬರೆದಿದ್ದ 7,70,209 ಮಕ್ಕಳ ಪೈಕಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆ ಮೂಲಕ ಎಸ್​​ಎಸ್​​ಎಲ್​​ಸಿಯಲ್ಲಿ ಶೇ.94.1 ಮಂದಿ ಪಾಸ್​​ ಆಗಿದ್ದಾರೆ. ಮಾರ್ಚ್ 18ರಿಂದ ಏಪ್ರಿಲ್ 2ರವರೆಗೂ ಒಟ್ಟು 2,870 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ ನಡೆದಿತ್ತು.


ಈ ಬಾರಿಯ ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ಶೇ. 98.40 ಫಲಿತಾಂಶದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದ್ದರೆ, ಶೇ. 98.18 ಫಲಿತಾಂಶ ಪಡೆದ ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶೇ.85.06 ಫಲಿತಾಂಶದೊಂದಿಗೆ ಕಲಬುರಗಿಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

Leave a Comment

Your email address will not be published. Required fields are marked *