AAP ತೊರೆದು ಬಿಜೆಪಿ ಸೇರುವುದಾಗಿ ಘೋಷಿಸಿದ ಸಂಸದ ರಾಘವ್ ಚಡ್ಡಾ

ಸಮಗ್ರ ನ್ಯೂಸ್: ಆಪ್‌ ಪಕ್ಷದ ಇತರ 6 ಸಂಸದರೊಂದಿಗೆ AAP ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವುದಾಗಿ ರಾಘವ್ ಚಡ್ಡಾ ಘೋಷಿಸಿದ್ದಾರೆ.

Ad Widget ... ..

ಸಂದೀಪ್ ಪಾಠಕ್ ಮತ್ತು ಅಶೋಕ್ ಮಿತ್ತಲ್ ಅವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಘವ್ ಚಡ್ಡಾ, “ನಾನು ನನ್ನ ರಕ್ತ ಮತ್ತು ಬೆವರಿನಿಂದ ಪೋಷಿಸಿದ, ನನ್ನ ಯೌವ್ವನದ 15 ವರ್ಷಗಳನ್ನು ಅರ್ಪಿಸಿದ ಆಪ್ ತನ್ನ ತನ್ನ ಮೂಲ ತತ್ವಗಳು, ಮೌಲ್ಯಗಳು ಮತ್ತು ನೈತಿಕತೆಯಿಂದ ದೂರವಾಗಿದೆ”, ಎಂದು ಹೇಳಿದ್ದಾರೆ.

Ad Widget

“ಈಗ ಈ ಪಕ್ಷವು ರಾಷ್ಟ್ರದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿಲ್ಲ, ಬದಲಾಗಿ ಅದರ ವೈಯಕ್ತಿಕ ಲಾಭಕ್ಕಾಗಿ ಕೆಲಸ ಮಾಡುತ್ತಿದೆ. ಕಳೆದ ಕೆಲವು ವರ್ಷಗಳಿಂದ, ನಾನು ತಪ್ಪು ಪಕ್ಷದಲ್ಲಿ ಇದ್ದ ಸರಿಯಾದ ವ್ಯಕ್ತಿ ಎಂದು ನನಗೆ ಅನಿಸುತ್ತಿದೆ. ಆದ್ದರಿಂದ, ಇಂದು, ನಾನು ಆಪ್‌ ನಿಂದ ದೂರ ಸರಿಯುತ್ತಿದ್ದೇನೆ ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಆಪ್‌ಗೆ ಸೇರಿದ ಮೂರನೇ ಎರಡರಷ್ಟು ಸದಸ್ಯರಾದ ನಾವು ಭಾರತದ ಸಂವಿಧಾನದ ನಿಬಂಧನೆಗಳನ್ನು ಪಾಲಿಸಿಕೊಂಡು ಬಿಜೆಪಿಯೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದ್ದೇವೆ ಎಂದು ರಾಘವ್ ಚಡ್ಡಾ ಹೇಳಿದ್ದಾರೆ.

Leave a Comment

Your email address will not be published. Required fields are marked *