ಭಾರತಕ್ಕೆ ಈ ವರ್ಷ ‌ಎಲ್ ನಿನೋ ಭೀತಿ| ಮಳೆ ಕೊರತೆಯ ಆತಂಕ

ಸಮಗ್ರ ನ್ಯೂಸ್: ಭಾರತ ಸೇರಿದಂತೆ ವಿಶ್ವದ ಹಲವು ಭಾಗಗಳಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚಿನ ತಾಪಮಾನ ಮತ್ತು ಕಡಿಮೆ ಮಳೆಯಾಗುವ ಸಾಧ್ಯತೆಯಿದೆ ಎಂದು ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಸಿದೆ. ಪೆಸಿಫಿಕ್ ಸಾಗರದಲ್ಲಿ ಸೃಷ್ಟಿಯಾಗುತ್ತಿರುವ ‘ಎಲ್ ನಿನೋ’ ವಿದ್ಯಮಾನವು ಮೇ ತಿಂಗಳಿನಿಂದಲೇ ಪ್ರಭಾವ ಬೀರಲಿದ್ದು, ಇದು ಭಾರತದ ಮುಂಗಾರು ಮಳೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುವ ಆತಂಕ ಮೂಡಿಸಿದೆ.

Ad Widget ... ..

ಮೇ, ಜೂನ್ ಮತ್ತು ಜುಲೈ ತಿಂಗಳುಗಳಲ್ಲಿ ಭಾರತದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗಲಿದೆ. ಉತ್ತರ ಮತ್ತು ಮಧ್ಯ ಭಾರತದ ಬಯಲು ಸೀಮೆಯಲ್ಲಿ ತೀವ್ರತರದ ಹೀಟ್‌ವೇವ್ (Heatwave) ಅಥವಾ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.

Ad Widget

ಎಲ್ ನಿನೋ ಪ್ರಭಾವದಿಂದಾಗಿ ಈ ಬಾರಿ ನೈಋತ್ಯ ಮುಂಗಾರು (Southwest Monsoon) ಮಳೆಯು ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಈಗಾಗಲೇ ಈ ವರ್ಷ ಶೇ. 92 ರಷ್ಟು ಮಾತ್ರ ಮಳೆಯಾಗಬಹುದು ಎಂದು ಅಂದಾಜಿಸಿದೆ.

ಕಳೆದ ಕೆಲವು ವರ್ಷಗಳಿಂದ ಇದ್ದ ‘ಲಾ ನಿನೋ’ (ತಂಪು ವಾತಾವರಣ) ಪರಿಣಾಮವು ಮುಗಿದಿದ್ದು, ಈಗ ‘ಎಲ್ ನಿನೋ’ (ಬಿಸಿ ವಾತಾವರಣ) ಆರಂಭವಾಗುತ್ತಿದೆ. ಇದು ಜಾಗತಿಕ ತಾಪಮಾನ ಏರಿಕೆಗೆ ಪ್ರಮುಖ ಕಾರಣವಾಗಲಿದೆ ಎಂದು ಹವಾಮಾನ ತಜ್ಞ ವಿಲ್ಫ್ರಾನ್ ಮೌಫೌಮಾ ಒಕಿಯಾ ತಿಳಿಸಿದ್ದಾರೆ.

Leave a Comment

Your email address will not be published. Required fields are marked *