ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಬಳಿ ಭೀಕರ ಅಪಘಾತ| ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದುರ್ಮರಣ| ಸಹ ಸವಾರೆ ಗಂಭೀರ

ಸಮಗ್ರ ನ್ಯೂಸ್: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ದಾರುಣವಾಗಿ ಸ್ಥಳದಲ್ಲೇ ಮೃತಪಟ್ಟಿದ್ದು, ಸ್ಕೂಟಿಯಲ್ಲಿದ್ದ ಸಹ ಸವಾರೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

Ad Widget . Ad Widget . Ad Widget . Ad Widget . Ad Widget .

ನೀರಕಟ್ಟೆ ಪ್ರದೇಶದಲ್ಲಿ ಸ್ಕೂಟಿ ಮತ್ತು ಲಾರಿ ನಡುವೆ ಈ ಭೀಕರ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಜೊತೆಗಿದ್ದ ಮಹಿಳೆಯ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.

Ad Widget . Ad Widget .

ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ತೀವ್ರತೆಗೆ ಸ್ಕೂಟಿ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತಪಟ್ಟ ವ್ಯಕ್ತಿ ಮತ್ತು ಗಾಯಾಳುವಿನ ವಿಳಾಸ ಹಾಗೂ ಪೂರ್ಣ ವಿವರಗಳು ಲಭ್ಯವಾಗಿಲ್ಲ.

Leave a Comment

Your email address will not be published. Required fields are marked *